ಲೋಕಸಭಾ ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮವಿಲ್ಲ

ಹುಬ್ಬಳ್ಳಿ 4: ರಾಜ್ಯ  ಲೋಕಸಭಾ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಜಯಸಾಧಿಸುವ ಮೂಲಕ  ಅತ್ಯುತ್ತಮ ಸಾಧನೆ ಪ್ರದರ್ಶಿಸಲಿವೆ  ಎಂದು  ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಶನಿವಾರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

  ಸುದ್ಧಿಗಾರರೊಂದಿಗೆ ಮಾತನಾಡುತ್ತಿದ್ದ  ಅವರು,  ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಖಂಡಿತ  ಅವರಿಗೆ ಭಾರಿ  ನಿರಾಶೆ ಕಾದಿದೆ ಎಂದು  ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯ ಫಲಿತಾಂಶ  ಮೈತ್ರಿ ಸಕರ್ಾರ ಸ್ಥಿರತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ  ಐದು ವರ್ಷಗಳ  ಅವಧಿ ಪೂರ್ಣಗೊಳಿಸಲಿದೆ ಎಂದು ಡಾ.ಪರಮೇಶ್ವರ  ವಿಶ್ವಾಸ ವ್ಯಕ್ತಪಡಿಸಿದರು. ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿ,  ಪಕ್ಷ ತನ್ನ ಸ್ಥಾನಗಳನ್ನು ಉಳಿಸಿಕೊಳ್ಳಲಿದೆ ಎಂಬ ಆಶಯ ವ್ಯಕ್ತಪಡಿಸಿದರು. 

  ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳಲ್ಲಿ  ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ನಿರ್ಬಂದ ವಿಧಿಸಿರುವುದಕ್ಕೆ ತೀವ್ರ  ಅಸಮಧಾನ ವ್ಯಕ್ತಪಡಿಸಿರುವ  ಉಪ ಮುಖ್ಯಮಂತ್ರಿ,ಬರಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಳಿಸಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. 

  ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಬಂದ ಸಡಿಲಿಸುವಂತೆ  ರಾಜ್ಯಸರ್ಕಾರದ ಕೋರಿಕೆಗಳಿಗೆ ಚುನಾವಣಾ ಆಯೋಗ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಈ ಸಂಬಂಧ  ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು. 

  ಚುನಾವಣಾ ಮಾದರಿ ನೀತಿ ಸಂಹಿತೆ ರಾಜ್ಯ ಸಕರ್ಾರವನ್ನು ನಿಶ್ಚಲ ಸ್ಥಿತಿಗೆ ತಂದು ನಿಲ್ಲಿಸಿದೆ ಎಂದು  ಬೇಸರ ವ್ಯಕ್ತಪಡಿಸಿದರು.