ನ.10ರಂದು ವಿಜೃಂಭಣೆಯ ಟಿಪ್ಪು ಜಯಂತಿ ಆಚರಣೆ: ಡಿಸಿ

ಕಾರವಾರ: ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನವೆಂಬರ್ 10ರಂದು ಜಿಲ್ಲಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಹಜರತ್ ಟಿಪ್ಪು ಜಯಂತಿ ಆಚರಣೆ ಕುರಿತಂತೆ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಸಕರ್ಾರದ ಆದೇಶದಂತೆ ನವೆಂಬರ್ 10ರಂದು ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಿಷ್ಟಾಚಾರದಂತೆ ವಿಜೃಂಭಣೆಯಿಂದ ಟಿಪ್ಪು ಜಯಂತಿ ಆಚರಿಸಲಾಗುವುದು ಎಂದರು.

ಜಿಲ್ಲಾ ಕೇಂದ್ರ ಕಾರವಾರದ ಜಿಲ್ಲಾ ರಂಗಮಂದಿರದಲ್ಲಿ ಟಿಪ್ಪು ಅವರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ, ಟಿಪ್ಪು ಅವರ ಕುರಿತಂತೆ ತಜ್ಞರಿಂದ ವಿಶೇಷ ಉಪನ್ಯಾಸ ಏರ್ಪಡಿಲಾಗುವುದು. ಅಲ್ಲದೆ ಟಿಪ್ಪು ಜಯಂತಿ ಅಂಗವಾಗಿ ಕಾರವಾರ ತಾಲೂಕು ಪ್ರೌಢಶಾಲೆ ವಿದ್ಯಾಥರ್ಿಗಳಿಂದ ಪ್ರಬಂಧ ಸ್ಪಧರ್ೆ ಹಮ್ಮಿಕೊಂಡು ವಿಜೇತರಾದ ಮೂವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಗಣ್ಯರನ್ನು ಅಹ್ವಾನಿಸಲಾಗುವುದು. ಸಮುದಾಯದ ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ಸಮುದಾಯ ಮುಖಂಡರಿಗೆ ತಿಳಿಸಿದರು.  ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಗೋಪಾಲ್ ಬ್ಯಾಕೋಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಹಿಮಂತರಾಜು ಜಿ., ನಗರಸಭೆ ಆಯುಕ್ತ ಯೋಗೇಶ್ವರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.