ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರ ಪ್ರವಾಸ ಕಾರ್ಯಕ್ರಮ
ಗದಗ 17: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಫೆಬ್ರುವರಿ 19 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಕೊಳ್ಳಲಿದ್ದು ವಿವರ ಇಂತಿದೆ. ಫೆಬ್ರುವರಿ 19 ರಂದು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ಅಣ್ಣಿಗೇರಿ ಮಾರ್ಗವಾಗಿ ನರಗುಂದ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಕೊಳಚೆ ಪ್ರದೇಶಗಳ ಪರೀವೀಕ್ಷಣೆ ಹಾಗೂ ಪ್ರಧಾನ ಮಂತ್ರಿಆವಾಸ್ ಯೋಜನೆಯಡಿ ಮನೆಗಳ ಕಾಮಗಾರಿ ಹಾಗೂ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳ ಪರೀವೀಕ್ಷಣೆ ಮತ್ತು ಸಾರ್ವಜನಿಕರ ಕುಂದುಕೊರತೆ ಆಲಿಸುವರು. ನಂತರ ರಾತ್ರಿ 7.30 ಗಂಟೆಗೆ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಪ್ರಕಟಣೆ ತಿಳಿಸಿದೆ.