ಕಾರ್ಮಿಕ ಸಚಿವ ಸಂತೋಸ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ
ಗದಗ 15: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಫೆಬ್ರುವರಿ 18 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ. ಫೆಬ್ರುವರಿ 18 ರಂದು ಬೆ 7 ಗಂಟೆಗೆ ಧಾರವಾಡದಿಂದ ಹೊರಟು ಬೆಳಿಗ್ಗೆ 9 ಗಂಟೆಗೆ ಗದುಗಿಗೆ ಆಗಮಿಸುವರು. ಬೆಳಿಗ್ಗೆ 9.30 ರಿಂದ 10.30 ಗಂಟೆಯವರೆಗೆ ಗದಗ ಜಿಲ್ಲೆಯ ಶಾಸಕರು /ಜಿಲ್ಲಾಧಿಕಾರಿ / ಪೊಲೀಸ ವರಿಷ್ಟಾಧಿಕಾರಿ/ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಡನೆ ಸಭೆ ನಡೆಸುವರು. ಬೆ10.30 ಗಂಟೆಯಿಂದ 11.30 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಬೆ 11.30 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾಲೀಕ ವರ್ಗದ ಸಂಘಟೆನಗಳ/ ಆಡಳಿತ ವರ್ಗದವರ ಸಭೆ ನಡೆಸುವರು. ಮಧ್ಯಾಹ್ನ 12 ರಿಂದ 12.30 ಗಂಟೆಯವರೆಗೆ ಕಾರ್ಮಿಕ ಸಂಘಟನೆಗಳ ಸಭೆ ನಡೆಸುವರು. ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಗದಗಿನಿಂದ ಹೊರಟು ರಾತ್ರಿ 7 ಗಂಟೆಗೆ ಧಾರವಾಡಕ್ಕೆ ಪ್ರಯಾಣ ಮಾಡುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.