ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಪ್ರತಿ ಕ್ವಿಂಟಾಲ್ಗೆ ರೂ. 4620 ಬೆಲೆ ನಿಗದಿ

ಕೊಪ್ಪಳ 13: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ.4620/-ರಂತೆ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ತಿಳಿಸಿದರು. 

ಅವರು ಇಂದು (ಮೇ. 13 ರಂದು) ತಮ್ಮ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಖರೀದಿಸುವ ಸಂಬಂಧ ಟಾಸ್ಕ್ಫೋಸರ್್ ಸಮಿತಿ ಸಭೆಯಲ್ಲಿ ಮಾತನಾಡಿದರು.  

  2018-19ನೇ ಸಾಲಿನ ಹಿಂಗಾರು ಹಂಗಾಮಿನ ಕೇಂದ್ರ ಸಕರ್ಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ಗೆ ರೂ.4620/-ರಂತೆ ಕೊಪ್ಪಳ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಬೆಲೆ ನಿಗದಿಪಡಿಸಲಾಗಿದೆ.  ಸಕರ್ಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ಕಡಲೆಕಾಳು ಉತ್ಪನ್ನದ ಎಫ್.ಎ.ಕ್ಯೂ. ಗುಣಮಟ್ಟ ಚೆನ್ನಾಗಿ ಒಣಗಿರಬೇಕು.  ತೇವಾಂಶವು ಶೇ.12 ಕ್ಕಿಂತ ಕಡಿಮೆ ಇರಬೇಕು.  ಕಡಲೆಕಾಳು ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ & ಆಕಾರವನ್ನು ಹೊಂದಿರಬೇಕು.  ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು.  ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು.  ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು.  ಕಡಲೆ ಖರೀದಿ ಮುನ್ನ ಅಧಿಕಾರಿಗಳು ಈ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು.  ಪ್ರತಿ ರೈತರಿಂದ ಪ್ರತಿ ಎಕರೆಗೆ 03 ಕ್ವಿಂಟಾಲ್ರಂತೆ ಗರಿಷ್ಠ 10 (ಹತ್ತು) ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು.  ಜೂನ್. 07 ರೊಳಗೆ ಖರೀದಿಸಲಾಗುವುದು ಎಂದರು.

ಖರೀದಿ ಕೇಂದ್ರಗಳು: ಕುಕನೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ.  ಕುಷ್ಟಗಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ.  ಕನಕಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣ ಹಾಗೂ ಪಿ.ಎ.ಸಿ.ಎಸ್., ಹಿರೇಸಿಂಧೋಗಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.  ಕೊಪ್ಪಳ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು.   

ಅಗತ್ಯವಿರುವ ದಾಖಲೆಗಳು: ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ಅಗತ್ಯವಿರುವ ದಾಖಲೆಗಳು ಇಂತಿವೆ.  ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ.  2018-19ನೇ ಸಾಲಿನ ಪಹಣಿ ಪತ್ರ ಮತ್ತು ಈ ಪಹಣಿ ಪತ್ರದಲ್ಲಿ ಕಡಲೆಕಾಳು ಬೆಳೆದಿರುವ ಬಗ್ಗೆ ನಮೂದಾಗಿರಬೇಕು.  ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರಿಂದ ಕಡಲೆಕಾಳು ಬೆಳೆದ ಬಗ್ಗೆ ದೃಢೀಕರಣ ಪತ್ರ.  ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ.  ರೈತರ ನೋಂದಣಿಯನ್ನು ಖರೀದಿ ಕೇಂದ್ರಗಳಲ್ಲಿ ಮೇಲ್ಕಂಡ ದಾಖಲೆಗಳೊಂದಿಗೆ ಮೇ. 28 ರೊಳಗಾಗಿ ಮಾಡಿಕೊಳ್ಳಲಾಗುವುದು.  

  ಕೊಪ್ಪಳ ಜಿಲ್ಲೆಯ ರೈತರು ಇದರ ಸದುಪಯೋಗಪಡಿಸಿಕೊಂಡು ಯೋಜನೆಯ ಯಶಸ್ಸಿಗೆ ಸಹಕರಿಸಬೇಕು.  ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವತರ್ಿಗಳ ಮೊರೆ ಹೋಗಬಾರದು.  ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು.  ಯಾವುದೇ ಸಮಸ್ಯೆಗಳಿದ್ದಲ್ಲಿ ಕೊಪ್ಪಳ, ಕುಷ್ಟಗಿ, ಕುಕನೂರು ಹಾಗೂ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದಶರ್ಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಕನರ್ಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಶಾಖೆ ಕೊಪ್ಪಳ ದೂರವಾಣಿ ಸಂಖ್ಯೆ. 08539-230010, ಇವರನ್ನು ಸಂಪಕರ್ಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ತಿಳಿಸಿದರು. 

ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿದರ್ೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆಯ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ಸಂದಭ್ದಲ್ಲಿ ಉಪಸ್ಥಿತರಿದ್ದರು.