ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

Union Minister Prahlad Joshi's district tour program

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಗದಗ   21:  ಕೇಂದ್ರ  ಗ್ರಾಹಕ  ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ  ಸಚಿವರಾದ ಪ್ರಹ್ಲಾದ ಜೋಶಿ ಅವರು  ಮೇ 22 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು  ವಿವರ ಇಂತಿದೆ: ಮೇ 22 ರಂದು  ಬೆಳಿಗ್ಗೆ 7.45 ಗಂಟೆಗೆ  ಹುಬ್ಬಳ್ಳಿಯಿಂದ  ಹೊರಟು ಬೆ 8.45 ಗಂಟೆಗೆ ಗದಗ ರೈಲು ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9 ಗಂಟೆಗೆ ಅಮೃತ್ ಭಾರತ್ ಸ್ಟೇಶನ್ ಪುನರಾಭಿವೃದ್ಧಿಗೊಂಡ  ಯೋಜನೆಯಡಿ ರೈಲ್ವೆ ನಿಲ್ದಾಣಗಳ ಮತ್ತು ಇತರ ಯೋಜನೆಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ 12 ಗಂಟೆಗೆ ಗದಗ ರೈಲು ನಿಲ್ದಾಣದಿಂದ ಹುಬ್ಬಳ್ಳಿಗೆ  ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.