ಯುವ ಕೇಂದ್ರ ಹಾವೇರಿ ಹಾಗೂ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಮಹಾವಿದ್ಯಾಲಯ ಮಟ್ಟದ ಕ್ರೀಡಾಕೂಟ
ಹಾವೇರಿ 05 :ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಹುಕ್ಕೇರಿಮಠ ಹಾವೇರಿಯಲ್ಲಿ ದಿನಾಂಕ 05-03-2025 ರಂದು ನೆಹರು ಯುವ ಕೇಂದ್ರ ಹಾವೇರಿ ಹಾಗೂ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಮಹಾವಿದ್ಯಾಲಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದ ಉಧ್ಘಾಟನೆಯನ್ನು ಶ್ರೀ ವಿದ್ಯಾಪೀಠದ ಕಾರ್ಯಾಧ್ಯಕ್ಷರಾದ ಶ್ರೀಯುತ ಎಸ್. ಎಸ್. ಮುಷ್ಠಿಯವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಶ್ರೀ ವಿದ್ಯಾಪೀಠದ ಉಪಾಧ್ಯಕ್ಷರಾದ ಶ್ರೀಯುತ ವ್ಹಿ. ವ್ಹಿ. ಅಂಗಡಿಯವರು ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿ ಕ್ರೀಡೆಯ ಮಹತ್ವವನ್ನು ವಿದ್ಯಾರ್ಥಿನಿಯರಿಗೆ ತಿಳಿಸಿದರು. ನೆಹರು ಯುವ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಗಣೇಶ ರಾಯ್ಕರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕ್ರೀಡಾಕೂಟದಲ್ಲಿ ಸ್ಲೋಸೈಕ್ಲಿಂಗ್, ಶಾಟ್‌ಪುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ, ವಾಲಿಬಾಲ್, ರೀಲೆ, ಮುಂತಾದ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸವಿತಾ ಎಸ್. ಹಿರೇಮಠ ಹಾಗೂ ಕಾಲೇಜು ಒಕ್ಕೂಟದ ಅಧ್ಯಕ್ಷರಾದ ಶ್ರೀ ಟಿ. ಎನ್. ಮಡಿವಾಳರ ಹಾಗೂ ಮಹಾವಿದ್ಯಾಲಯದ ಭೋಧಕ, ಭೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.