ಲೋಕದರ್ಶನ ವರದಿ
ವಿಜಯಪುರ 02: ಜಿಲ್ಲೆಯಾದ್ಯಂತ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಪ್ಲಾಸ್ಟಿಕ್ ಸಂಗ್ರಹಣೆ ಮಾಡಿಕೊಂಡಿರುವ ಮಾಲೀಕರು ಕೂಡಲೇ ಸ್ಥಳೀಯ ಸಂಸ್ಥೆಗಳಿಗೆ ಒಪ್ಪಿಸಬೇಕು. ಇಲ್ಲದಿದ್ದಲ್ಲಿ ಅಂಗಡಿ ಲೈಸನ್ಸ್ ರದ್ದುಪಡಿಸಿ ಸಂಬಂಧಿಸಿದವರ ಮೇಲೆ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವ್ಯಾಪ್ತಿಯ ಘನತ್ಯಾಜ್ಯ ನಿಯಂತ್ರಣ ನಿಯಮಗಳು-2016ರ ಅನುಷ್ಠಾನ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶದ ಪಾಲನೆ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲು ರಚಿಸಿದ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ಲಾಸ್ಟಿಕ್ ಸಂಗ್ರಹಣೆ ಮಾಡಿಕೊಂಡ ಅಂಗಡಿ ಮಾಲೀಕರು ಕೂಡಲೇ ಪ್ಲಾಸ್ಟಿಕ್ ಸಂಗ್ರಹವನ್ನು ಸ್ಥಳೀಯ ಸಂಸ್ಥೆಗಳಿಗೆ ಒಪ್ಪಿಸಬೇಕು. ಇಲ್ಲದಿದ್ದಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಪೀಠದ ಆದೇಶದನ್ವಯ ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಪ್ಲಾಸ್ಟಿಕ್ ಬಳಕೆಯು ನಗರ ಗ್ರಾಮಗಳ ಸೌಂದರ್ಯವನ್ನು ಹಾಳು ಮಾಡುತ್ತದೆ. ಚರಂಡಿಗಳಲ್ಲಿ ಸಂಗ್ರಹವಾಗಿ ಚರಂಡಿ ನೀರು ರಸ್ತೆಗೆ ಹರಿಯಲು ಕಾರಣವಾಗುತ್ತದೆ. ದನಕರುಗಳು ಪ್ಲಾಸ್ಟಿಕ್ ಸೇವನೆಯಿಂದ ಸಾವನ್ನಪ್ಪುತ್ತಿವೆ. ಆದ್ದರಿಂದ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಸ್ಥಳೀಯ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿಕೊಂಡರು.
ಮಿತಬಳಕೆಯ ಪ್ಲಾಸ್ಟಿಕ್ನ್ನು ಹೊರತು ಪಡಿಸಿ ಇನ್ನಾವುದೇ ರೀತಿಯ ಪ್ಲಾಸ್ಟಿಕ್ನ್ನು ಬಳಕೆ ಮಾಡಬಾರದು. ಸ್ಥಳೀಯ ಸಂಸ್ಥೆಗಳು ಪ್ಲಾಸ್ಟಿಕ್ ನಾಶಕ್ಕೆ ಹತ್ತಿರದ ಸಿಮೆಂಟ್ ಕಾಖರ್ಾನೆಗಳ ಸಹಾಯ ಪಡೆದು ಕೋ-ಪ್ರೊಸೆಸಿಂಗ್ಗೆ ಒಳಪಡಿಸಬೇಕು ಎಂದು ಹೇಳಿದರು.
ಜಿಲ್ಲೆಯ ನಗರಸಭೆ, ಪಟ್ಟಣ ಪಂಚಾಯತ್, ತಾಲೂಕಾ ಪಂಚಾಯತ್, ಪುರಸಭೆ ವ್ಯಾಪ್ತಿಯಲ್ಲಿ ಮನೆ-ಮನೆಗೆ ಹೋಗಿ ಘನತ್ಯಾಜ್ಯ ಸಂಗ್ರಹಿಸಿ, ನಿಯಮಾನುಸಾರ ವಿಂಗಡಣೆ ಮಾಡಿ ಎರೆ ಹುಳು ಗೊಬ್ಬರ ತಯಾರಿಸಲು ಎಲ್ಲ ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು. ಎರೆಹುಳು ಗೊಬ್ಬರ ತಯಾರಿಕಾ ಪ್ರಕ್ರಿಯೆಗೆ ಸಂಬಂಧಿಸಿದ ಆರೋಗ್ಯ ನಿರೀಕ್ಷಕರಿಗೆ ಸೂಕ್ತ ನಿದರ್ೇಶನ ನೀಡಿ, ಆರೋಗ್ಯ ನಿರೀಕ್ಷಕರಿಲ್ಲದ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ಕೊರತೆ ನೆಪ ಹೇಳದೆ ಲಭ್ಯವಿರುವ ಪೌರಕಾಮರ್ಿಕರಿಗೆ ಸೂಕ್ತ ತರಬೇತಿ ನೀಡಿ ಎರೆಹುಳುಗೊಬ್ಬರ ತಯಾರಿಕೆಗೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆಗಳೂ ತಮ್ಮ ವ್ಯಾಪ್ತಿಯಲ್ಲಿ ಬರುವ ಉದ್ಯಾನ ಪ್ರದೇಶದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಘನತ್ಯಾಜ್ಯ ವಿಂಗಡಣೆ ಮಾಡಿ ಎರೆಹುಳು ಗೊಬ್ಬರ ತಯಾರಿಕಾ ಪ್ರಕ್ರಿಯೆ ನಡೆಸಬಹುದು. ಈ ಕುರಿತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಾದ್ಯಂತ ಕಸ ಸುಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ನಾಗರಿಕರು ಸಹಕರಿಸಬೇಕು. ನಿಯಮದ ವಿರುದ್ಧ ನಡೆದುಕೊಂಡಲ್ಲಿ ಸೂಕ್ತ ಕಾನೂನು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ವೈಯಕ್ತಿಕ ಶೌಚಾಲಯಗಳನಿರ್ಮಾಣಕ್ಕೆ ಕುರಿತಂತೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ಅನುದಾನದ ಸೂಕ್ತ ಬಳಕೆ ಮಾಡಿ ಗೊಂದಲವಿರುವೆಡೆ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸಿ ಎಂದು ಸೂಚನೆ ನೀಡಿದರು.
ಜಿಲ್ಲೆಯನ್ನು ಪರಿಸರ ಮಾಲಿನ್ಯ ಮುಕ್ತ, ಸ್ವಚ್ಛ ಸುಂದರ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಸ್ಥಳೀಯ ಸಂಸ್ಥೆಗಳು ವಿಶೇಷ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರನ್ನೊಳಗೊಂಡ ವಿಶೇಷ ಕಾರ್ಯಪಡೆ ಸಮಿತಿಯು ಘನತ್ಯಾಜ್ಯ ನಿಯಂತ್ರಣ ನಿಯಮಗಳು-2016 ಹಾಗೂ ರಾಷ್ಟ್ರೀಯ ಹಸಿರು ನ್ಯಾಯ ಪೀಠದ ಆದೇಶಗಳ ಅನುಷ್ಠಾನ ಕ್ರಮಗಳ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ರವೀಂದ್ರ ಕಾರಭಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಪ್ರದೀಪ ಮಮದಾಪುರ, ಮಹಾನಗರ ಪಾಲಿಕೆ ಆಯುಕ್ತ ಡಾ.ಔದ್ರಾಮ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿರೇಶ ಕುಮಾರ, ಪಾಲಿಕೆ ಪರಿಸರ ಅಭಿಯಂತರ ಜಗದೀಶ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು ಉಪಸ್ಥಿತರಿದ್ದರು.