ಲೋಕದರ್ಶನ ವರದಿ
ವಿಜಯಪುರ 18; ಜಿಲ್ಲಾಡಳಿತದ ವತಿಯಿಂದ ಇದೇ ಜೂನ್.27ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಜೂನ್.27ರಂದು ಆಚರಿಸುವ ನಾಡಪ್ರಭು ಕೆಂಪೇಗೌಡ ಅವರು ಜಯಂತಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಂದು ಬೆಳಿಗ್ಗೆ 9-30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ಬೆಳಿಗ್ಗೆ 11 ಗಂಟೆಗೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಷ್ಠಾಚಾರದಂತೆ ಎಲ್ಲ ಸಚಿವರು, ಶಾಸಕರು, ಜನಪ್ರತಿನಿಧಿಗಳನ್ನು ಆಹ್ವಾನಿಸುವುದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಕ್ಷಣೆ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕಿ ವಿದ್ಯಾವತಿ ಎಚ್.ಬಿ. ಸೇರಿದಂತೆ ವಿವಿಧ ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.