ವಿಜಯಪುರ: ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ: ಡಾ.ಮಹೇಂದ್ರ ಕಾಪ್ಸೆ ಅಭಿಮತ

ಲೋಕದರ್ಶನ ವರದಿ

ವಿಜಯಪುರ 11: ಶರವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಹಾಗೂ ಅಭಿವೃದ್ದಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ನಸಿಂಗ್ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡ ಜನಜಾಗೃತಿ ರ್ಯಾಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಜನಸಂಖ್ಯೆ ಹೆಚ್ಚಳಕ್ಕೆ ಅನಕ್ಷರತೆ ಪ್ರಮಾಣದಲ್ಲಿ ಹೆಚ್ಚಳ, ಬೇಗ ಮದುವೆ, ಗಂಡು ಮಗು ಬೇಕೆಂಬ ಹಂಬಲ, ಮೂಡನಂಬಿಕೆ, ಜನನ ಹಾಗೂ ಮರಣಗಳ ನಡುವಿನ ಅಂತರವೇ ಕಾರಣವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಜ್ಯೋತಿ ಪಾಟೀಲ, ಡಾ.ರಾಜೇಶ್ವರಿ ಗೊಲಗೇರಿ, ಡಾ.ಕವಿತಾ ದೊಡಮನಿ ಅವರು ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸ್ವಾಗತಿಸಿದರು. 

ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ, ಆರ್.ವ್ಹಿ. ಹೊನವಾಡ, ಕುಮಾರ ರಾಠೋಡ, ಹಾಗೂ ಸಕರ್ಾರಿ ನಸರ್ಿಂಗ್ ಶಾಲೆಯ ಮತ್ತು ವಿವಿಧ ನಸಿರ್ಂಗ್ ಕಾಲೇಜುಗಳ ಉಪನ್ಯಾಸಕರು, ಇಲಾಖೆ ಅಧಿಕಾರಿಗಳು,. ಇತರರು ಉಪಸ್ಥಿತರಿದ್ದರು.  ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಜನಜಾಗೃತಿ ರ್ಯಾಲಿಯು ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿವರೆಗೆ ಸಂಚರಿಸಿತು.