ಲೋಕದರ್ಶನ ವರದಿ
ವಿಜಯಪುರ 24: ಕಳೆದ 2018-19ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾಥರ್ಿನಿ ಕುಮಾರಿ ಸುಪ್ರಿಯಾ ಜೋಶಿ ಅವರನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಭಿನಂದನಾ ಫಲಕ ನೀಡಿ ಸನ್ಮಾನಿಸಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಅಭಿನಂದನಾ ಫಲಕ ನೀಡಿ ಸನ್ಮಾನಿಸಿದರು.
ಈ ಸಂದರ್ಭಧಲ್ಲಿ ಬೆಳಗಾವಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದಶರ್ಿಗಳು ಹಾಗೂ ಪದನಿಮಿತ್ತ ಸಹನಿದರ್ೇಶಕರಾದ ಎಂ.ಎಸ್.ಪ್ರಸನ್ನಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಸಿ.ಪ್ರಸನ್ನಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದರ್ೇಶಕ ಸಿ.ಬಿ.ಕುಂಬಾರ, ಶಿಕ್ಷಣಾಧಿಕಾರಿ ಎಸ್.ಎಸ್.ಮುಜಾವರ, ಡಯಟ್ ಪ್ರಾಂಶುಪಾಲರಾದ ಸಾಯಿರಾಬಾನು ಖಾನ್ ಸೇರಿದಂತೆ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಬೇಟಿ ಬಚಾವೋ ಬೇಟಿ ಪಡಾವೋ ನೋಡಲ್ ಅಧಿಕಾರಿ ನಿರ್ಮಲಾ ದೊಡಮನಿ, ಎಸ್.ಎಸ್.ಎಲ್.ಸಿ.ನೋಡಲ್ ಅಧಿಕಾರಿಗಳು, ಹಾಗೂ ಜಿಲ್ಲೆಯ ವಿವಿಧ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು