ರಕ್ತದಾನ; ದೇಹ ಮನಸ್ಸು ಆರೋಗ್ಯಯುತ: ಸತೀಶ ಕೆಲಗಾರ

blood donation; Healthy mind and body: Satish Kelagara

ರಕ್ತದಾನ; ದೇಹ ಮನಸ್ಸು ಆರೋಗ್ಯಯುತ: ಸತೀಶ ಕೆಲಗಾರ

ಹಾವೇರಿ 25: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜತೆಗೆ ಆತ್ಮತೃಪ್ತಿ ಸಿಗುತ್ತದೆ ಎಂದುಜಿಲ್ಲಾ ಓಷಧ ವ್ಯಾಪಾರಸ್ಥ ಸಂಘದ ಅಧ್ಯಕ್ಷ ಸತೀಶ ಕೆಲಗಾರ ಹೇಳಿದರು.ದಾನೇಶ್ವರಿ ನಗರದಲ್ಲಿರುವ ಭಂಟರ ಭವನದಲ್ಲಿ ಶುಕ್ರವಾರ ಆಲ್ ಇಂಡಿಯಾ ಆರ್ಗನೈಜೆಷನ್ ಆಫ್ ಕೆಮಿಸ್ಟ್‌ ್ಘ ಡ್ರಗ್ಗಿಸ್ಟ್‌ 50ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು  ಮಾತನಾಡಿದರು.ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು ಹೋಗಲಾಡಿಸಬೇಕು. ಹೆಚ್ಚು ಜನರು ಸೇರುವ ಧಾರ್ಮಿಕ ಕೇಂದ್ರಗಳಲ್ಲಿ ನಿಯಮಿತವಾಗಿ ರಕ್ತದಾನ ಶಿಬಿರ ಆಯೋಜಿಸಿದರೆ ದೇಶದಲ್ಲಿನ ರಕ್ತದ ಕೊರತೆ ನೀಗಿಸಬಹುದು. ಧಾರ್ಮಿಕ ಕೇಂದ್ರಗಳು ಪೂಜೆ ಪ್ರಾರ್ಥನೆಗಳಿಗೆ ಸೀಮಿತವಾಗಿರದೆ ಸಮಾಜಮುಖಿಯಾಗಿ ಸ್ಪಂದಿಸಬೇಕು ಎಂದರು.ಶಿಬಿರದಲ್ಲಿ 60ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ಉಪಾಧ್ಯಕ್ಷ ಶರದ ಕುದರಿ, ಕಾರ್ಯದರ್ಶಿ ರಾಜೇಂದ್ರ ಇರಕಲ್, ಹಾವೇರಿ ತಾಲ್ಲೂಕು ಅಧ್ಯಕ್ಷ ಸಿದ್ಧಲಿಂಗಪ್ಪ ಮೇನಸಿನಹಾಳ, ಕಾರ್ಯದರ್ಶಿ ಸುಬ್ರಮಣ್ಯ ಸೇರಿದಂತೆ ಇತರರು ಇದ್ದರು.