ಲಾಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗೆ 816.23 ಕೋಟಿ ರೂ. ನಷ್ಟ

ಬೆಂಗಳೂರು, ಏ.22, ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಲು ಸರ್ಕಾರವು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಇದುವರೆಗೆ 816.23 ಕೋಟಿ ರೂ. ನಷ್ಟ ಉಂಟಾಗಿದೆ.ಲಾಕ್‌ ಡೌನ್ ಹಿನ್ನೆಲೆಯಲ್ಲಿ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ಎಲ್ಲಾ ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುವುದರಿಂದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಇದುವರೆಗೆ ಒಟ್ಟಾರೆ ರೂ.816.23 ಕೋಟಿ ಸಾರಿಗೆ ಆದಾಯ ನಷ್ಟವಾಗಿರುತ್ತದೆ ಎಂದು ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಸ್ಥೆವಾರು ವಿವರಗಳು ಏಪ್ರಿಲ್ 20ರವರೆಗೆ
ಕರಾಸಸಾ ನಿಗಮ- 214.89 ಕೋಟಿ
ವಾಕರಸಾ ಸಂಸ್ಥೆ-172
ಈಕರಸಾ ಸಂಸ್ಥೆ: 180
ಬಿಎಂಸಿಟಿ- 149.34
ಒಟ್ಟು 816.23