ವಿಜಯಪುರ 29: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಸವೇಶ್ವರ ಅಧ್ಯಯನ ಪೀಠ ಇವರ ಸಹಯೋಗದಲ್ಲಿ ಸಾಂಸ್ಕೃತಿಕ ನಾಯಕ ಮತ್ತು ವಿಶ್ವಗುರು ಶ್ರೀ ಬಸವೇಶ್ವರರ 892ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಇದೇ ದಿ. 30 ರಂದು ಬೆಳಿಗ್ಗೆ 10:00 ಗಂಟೆಗೆ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಾಹಿತಿ ಮತ್ತು ಸಿಂಡಿಕೇಟ ಸದಸ್ಯ ಡಾ.ಎಸ್.ನಟರಾಜ ಬೂದಾಳು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ವಹಿಸಲಿದ್ದಾರೆ. ಸಮಾರಂಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ ಎಂದು ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಪ್ರೊ.ರಾಜಕುಮಾರ ಪಿ. ಮಾಲೀಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.