ದೌರ್ಜನ್ಯ ಪ್ರಕರಣ ತನಿಖೆ ಚುರುಕುಗೊಳಿಸಲು ಸೂಚನೆ ಸ್ಮಶಾನ ಭೂಮಿ; ತಕ್ಷಣ ಪ್ರಸ್ತಾವ ಸಲ್ಲಿಸಿ- ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಬೆಳಗಾವಿ, 31: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಬೇಡಿಕೆಗೆ ಅನುಗುಣವಾಗಿ ತಕ್ಷಣವೇ ಅಗತ್ಯ ಸ್ಮಶಾನ ಭೂಮಿ ಮಂಜೂರು ಮಾಡಲು ಕ್ರಮ ಕೈಗೊಳಗಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಡಿ.31) ನಡೆದ ಪರಿಶಿಷ್ಟ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಥಣಿ ಹಾಗೂ ಹುಕ್ಕೇರಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಸಲ್ಲಿಸಿರುವ ಸ್ಮಶಾನ ಭೂಮಿ ಬೇಡಿಕೆ ಹಾಗೂ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ನಿಪ್ಪಾಣಿ ತಾಲ್ಲೂಕಿನಲ್ಲಿ ಖಾಸಗಿಯವರು ಸ್ಮಶಾನಕ್ಕೆ ಜಾಗೆ ನೀಡಲು ಒಪ್ಪಿಗೆ ನೀಡಿದ್ದಾರೆ ಸಮಿತಿಯ ನೂತನ ಸದಸ್ಯ ಅಶೋಕ ಅಸೋದೆ ಸಭೆಯ ಗಮನಕ್ಕೆ ತಂದರು. ತಕ್ಷಣವೇ ಪ್ರಸ್ತಾವ ಸಲ್ಲಿಸಲು ತಹಶೀಲ್ದಾರ ಅವರಿಗೆ ಸೂಚನೆ ನೀಡಿದರು.

ಆರ್.ಟಿ.ಇ ಅಡಿ ಪ್ರವೇಶ ಪಡೆಯುವ ವಿದ್ಯಾಥರ್ಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ನಿದರ್ೇಶನ ನೀಡಿದರು.

ತಹಶೀಲ್ದಾರ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳ ತಂಡ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಬಿಸಿಯೂಟದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು. ಅದೇ ರೀತಿ ಅಂಗನವಾಡಿಗಳಲ್ಲೂ ಆಹಾರ ಪದಾರ್ಥಗಳನ್ನು ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಕಾರಣಕೇಳಿ ನೋಟಿಸ್:

ಸಭೆಗೆ ಗೈರುಹಾಜರಾಗಿದ್ದ ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕೆ.ಐ.ಎ.ಡಿ.ಬಿ ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪ ಯೋಜನೆಯಡಿ ಅನುದಾನ ಬಿಡುಗಡೆ ಆಗದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಅನುಸರಣಾ ವರದಿ ನೀಡಿರಲಿಲ್ಲ. ಸಭೆಗೂ ಹಾಜರಾಗದಿರುವುದರಿಂದ ಕಾರಣಕೇಳಿ ನೋಟಿಸ್ ನೀಡುವಂತೆ ತಿಳಿಸಿದರು.

ದೌರ್ಜನ್ಯ ಪ್ರಕರಣ; ಸಾಕ್ಷಿಗಳಿಗೆ ಅನುಕೂಲ ಕಲ್ಪಿಸಲು ನಿದರ್ೇಶನ:

ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿದಾರರು ಪದೇ ಪದೇ ನ್ಯಾಯಾಲಯಕ್ಕೆ ಅಲೆದಾಡುವ ಪರಿಸ್ಥಿತಿ ಇರುವುದರಿಂದ ಸಾಕ್ಷಿದಾರರು ವಿಮುಖರಾಗುತ್ತಿದ್ದು, ಪ್ರಕರಣಗಳು ಬಿದ್ದು ಹೋಗುತ್ತಿವೆ ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ಸಮಿತಿಯ ಸದಸ್ಯ ಅಸೋದೆ ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಸಾಕ್ಷಿದಾರರಿಗೆ ಮುಂಚಿತವಾಗಿಯೇ ಮಾಹಿತಿ ನೀಡುವ ಮೂಲಕ ಅನುಕೂಲ ಕಲ್ಪಿಸುವಂತೆ ಸಾರ್ವಜನಿಕ ಅಭಿಯೋಜಕರಿಗೆ ತಿಳಿಸಿದರು.

ದೌರ್ಜನ್ಯ ಮತ್ತು ಪೋಸ್ಕೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ಸಭೆ ನಡೆಸುವಂತೆ ಕೂಡ ಜಿಲ್ಲಾಧಿಕಾರಿ ಹೇಳಿದರು. ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಯಾವುದೇ ಪ್ರಕರಣದ ಪರಿಹಾರ ಬಾಕಿ ಉಳಿದಿಲ್ಲ. ಎಲ್ಲರಿಗೂ ಪರಿಹಾರ ಪಾವತಿಸಲಾಗಿದೆ ಎಂದು ತಿಳಿಸಿದರು.

ವಾಲ್ಮೀಕಿ ಪುತ್ಥಳಿಯನ್ನು ನಗರದಲ್ಲಿ ಸ್ಥಾಪಿಸಬೇಕು; ನಗರದ ಪ್ರವಾಸಿ ಮಂದಿರದ ಎದುರು ಸ್ಥಾಪಿಸುವ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ವಿಜಯ ತಳವಾರ ಆಗ್ರಹಿಸಿದರು. ಈ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಚಚರ್ಿಸಿ ತೀಮರ್ಾನಿಸಲಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಡಿಸಿಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತ ಶಶಿಧರ್ ಕುರೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ.ಅಮರನಾಥ್ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿದರ್ೇಶಕರಾದ ಡಾ.ಉಮಾ ಸಾಲಿಗೌಡರ ಸಭೆ ನಿರ್ವಹಿಸಿದರು.

ಪರಿಶಿಷ್ಟ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನೂತನ ಸದಸ್ಯರಾದ ಅಶೋಕ ಅಸೋದೆ, ಸುರೇಶ್ ತಳವಾರ, ಅಣ್ಣಾಸಾಹೇಬ್ ಹಂಚಿನಮನಿ, ವಿಜಯ ತಳವಾರ, ಗಂಗಾಬಾಯಿ ಸಿಂಗನವರ, ಲೆವಿನಾ, ಮಹಾದೇವ, ಮಲ್ಲಿಕಾಜರ್ುನ ಖೋತ ಚಚರ್ೆಯಲ್ಲಿ ಪಾಲ್ಗೊಂಡಿದ್ದರು.