ಗದಗ 23: ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಅವರ ಮಾರ್ಗದರ್ಶನದಲ್ಲಿ ಮೇ ತಿಂಗಳಿನಲ್ಲಿ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ, ಮಲ್ಲಿಕಾರ್ಜುನಪೂರ ಗ್ರಾಮ, ಗದಗ ತಾಲೂಕಿನ ಮುಳಗುಂದ ಪಟ್ಟಣ, ರೋಣ ತಾಲೂಕಿನ ನರೇಗಲ್ಲ ಪಟ್ಟಣ, ನರಗುಂದ ತಾಲೂಕಿನ ನರಗುಂದ ಪಟ್ಟಣ, ಹಾಗೂ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ ಗದಗ ಹಾಗೂ ತಾಲೂಕಾ ತಂಬಾಕು ನಿಯಂತ್ರಣ ತನಿಖಾ ದಳಗಳ ಮೂಲಕ ಶಾಲಾ ಕಾಲೇಜುಗಳ ಸುತ್ತ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಕ್ರಮ ವಹಿಸಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದವರ ವಿರುದ್ಧ 52 ಪಕ್ರರಣ ದಾಖಲಿಸಿ ರೂ.9400/- ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ಎಲ್ಲಾ ತಂಬಾಕು ಮಾರಾಟಗಾರರು ಸ್ಥಳೀಯ ಸಂಸ್ಥೆಗಳಾದ ಪುರಸಭೆ. ಪಟ್ಟಣ ಪಂಚಾಯತ್, ನಗರಸಭೆಗಳಲ್ಲಿ ಪ್ರತ್ಯೇಕ ತಂಬಾಕು ಮಾರಾಟ ಮಾಡುವ ಪರವಾನಿಗೆಯನ್ನು ಪಡೆದು ಮಾರಾಟ ಮಾಡಲು ಸೂಚಿಸಲಾಯಿತು. ತಂಬಾಕು ಸೇವನೆಯಿಂದಾಗು ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧದ ಕುರಿತು ಪ್ರತಿಯೊಂದು ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಬಿತ್ತರಿಸುವದು ಅ ಸ್ಥಳದ ಮಾಲೀಕರ ಜಾವಾಬ್ದಾರಿಯಾಗಿರುತ್ತದೆ ಚಹಾ ಅಂಗಡಿ ಪಾನ ಶಾಪ್ ಅಂಗಡಿಗಳ ಒಳಗಡೆ ಸುಮಾರು ಅನಧಿಕೃತ ಧೂಮಪಾನ ಅಡ್ಡಾಗಳನ್ನು ಮಾಡಿಕೊಂಡು, ಧೂಮಪಾನ ಮಾಡದ ಅಮಾಯಕರ ಆರೋಗ್ಯದ ಮೇಲೆ ಪರಿಣಾಮ ಬೀರಿ ಅವರು ತಂಬಾಕಿನಿಂದ ಉಂಟಾಗುವ ಖಾಯಿಲೆಗಳಿಗೆ ಬಲಿಯಾಗುತ್ತಿರುವದರಿಂದ ಇಂತಹ ಅಡ್ಡಾಗಳನ್ನು ಬಂದ ಮಾಡುವಂತೆ ಎಚ್ಚರಿಕೆ ನೀಡಿ ಕ್ರಮಕೈಗೊಳ್ಳಲಾಯಿತು. ತಂಬಾಕು ಮುಕ್ತ ಯುವ ಪಿಳಿಗೆ ಮಾಡುವ ನಿಟ್ಟಿನಲ್ಲಿ, ವಿದ್ಯಾರ್ಥಿಗಳಿ ತಂಬಾಕು ಉತ್ಪನ್ನಗಳು ಸುಲಭವಾಗಿ ದೊರೆತು ಚಟಕ್ಕೆ ಬಲಿಯಾಗುವದನ್ನು ತಪ್ಪಿಸಲು, ಶಾಲಾ ಕಾಲೇಜು ಆವರಣದಿಂದ 100 ಗಜದ ವರೆಗೆ ತಂಬಾಕು ಮಾರಾಟ ನಿಷೇಧ ಮಾಡಲಾಗಿದೆ, ತಂಬಾಕು ಕುರಿತ ಜಾಹಿರಾತು ನಿಷೇಧಿಸುವದು, 18 ವರ್ಷದೊಳಗಿನವರಿಗೆ ತಂಬಾಕು ನಿಷೇಧಿಸುವದು ,ತಂಬಾಕು ಉತ್ಪನ್ನಗಳ ಪ್ಯಾಕ್ ಮೇಲೆ ಶೇ 85ಅ ರಷ್ಟು ಅರೋಗ್ಯ ಎಚ್ಚರಿಕೆ ಚಿನ್ಹೆ ಕಡ್ಡಾಯವಾಗಿದೆ, ನಮ್ಮ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳು ಕಾನೂನು ಬದ್ಧವಾಗಿದ್ದರು ಅವುಗಳ ಮಾರಾಟ ಹಾಗೂ ಅದರ ಉಪಯೋಗ ಕೋಟ್ಪಾ ಕಾಯ್ದೆ ಅಡಿಯಲ್ಲಿ ಅವಕಾಶವಿದ್ದು ಅದನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತಿ ಕ್ರಮ ವಹಿಸಲಾಗುವದು.
ಈ ದಾಳಿಗಳಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ವಿ.ಎಸ್ ನಾಯ್ಕರ್ ಟಿ.ಎಮ್.ಸಿ ನರಗುಂದ, ಪೊಲೀಸ್ ಇಲಾಖೆಯ ಜಿ.ಎಸ್. ದೇಸಾಯಿ, ಬಿ.ಎಸ್. ಮಾಯಮ್ಮನವರ ಹಾಗೂ ಹೆಚ್.ಬಿ ಗುದಣ್ಣವರ ಆರೋಗ್ಯ ಇಲಾಖೆಯ ಸಿ.ಎಫ್ ಕುಂಬಾರ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು ಶ್ರೀಮತಿ ಬಿ.ಸಿ.ಚಿತ್ತರಗಿ ಸಾಮಾಜಿಕ ಕಾರ್ಯಕರ್ತೆ ಉಪಸ್ಥಿತರಿದ್ದರು