ಆಶಾ ಕಾರ್ಯಕರ್ತಿ ಯರ ಗೌರವ ಧನ 10ಸಾವಿರ ರೂ.ಹೆಚ್ಚಿಸಲು ಕ್ರಮ: ಶ್ರೀರಾಮುಲು

ಬಳ್ಳಾರಿ, ಅ  5:   ರಾಜ್ಯದಲ್ಲಿ ಆಶಾ ಕಾರ್ಯಕರ್ತಿಯರಿಗೆ 500 ಗೌರವ ಧನ ಹೆಚ್ಚಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಅವರ ಗೌರವಧನವನ್ನು 10ಸಾವಿರ ರೂ.ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.  

ನಗರದಲ್ಲಿಂದು 7.5ಕೋಟಿ ರೂ.ವೆಚ್ಚದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿ ಮತ್ತು ಡಿ ಗ್ರೂಪ್ ನೌಕರರ ವಸತಿ ಗೃಹಗಳು, ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳ ವಸತಿ ನಿಲಯ ಸೇರಿ ವಿವಿಧ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತಿಯರಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ಕಲ್ಪಿಸಲಿದೆ ಎಂದರು.  

ಉತ್ತಮ ಚಿಕಿತ್ಸೆಗೆ ಖ್ಯಾತಿ ಪಡೆದಿರುವ ಬಳ್ಳಾರಿ ಜಿಲ್ಲಾಸ್ಪತ್ರೆಯನ್ನು 300 ಹಾಸಿಗೆಗಳಿಂದ 500 ಹಾಸಿಗೆಗೆ ಮೇಲ್ದಜರ್ೆಗೇರಿಸಲಾಗುವುದು. 

ಇದಕ್ಕೆ ಬೇಕಾದ ಅಗತ್ಯ ಸಲಕರಣೆಗಳು, ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ಆಸ್ಪತ್ರೆಗಳಲ್ಲಿನ ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಆ ಆಸ್ಪತ್ರೆಗಳಿಗೆ ಸೌಕರ್ಯ ಕಲ್ಪಿಸುವ ಹಾಗೂ ಮೇಲ್ದಜರ್ೆಗೇರಿಸುವ ಸಂಬಂಧ ಬಜೆಟ್ ಅನುಮೋದನೆ ಪಡೆದು ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು ಎಂದರು.  

ಆಸ್ಪತ್ರೆಗಳ ಹಾಗೂ ರೋಗಿಗಳ ಸ್ಥಿತಿಗತಿ ಅರಿಯುವ ಸದಾಶಯದೊಂದಿಗೆ ಆಸ್ಪತ್ರೆ ವಾಸ್ತವ್ಯವನ್ನು ಆರಂಭಿಸಿದ್ದೇನೆ ಎಂದು ತಿಳಿಸಿದ  ಅವರು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿಯೂ ಮುಂದಿನ ದಿನಗಳಲ್ಲಿ ವಾಸ್ತವ್ಯ ಹೂಡಲಾಗುವುದು ಎಂದರು. 

ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಜನರಿಕ್ ಔಷಧಿ ಆರಂಭಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಬಳ್ಳಾರಿಯಲ್ಲಿಯೂ ಶೀಘ್ರವಾಗಿ ಆರಂಭಿಸಲಾಗುವುದು. ವೈದ್ಯರು ರೋಗಿಗಳಿಗೆ ಔಷಧಿ ಖರೀದಿಗೆ ಚೀಟಿ ಬರೆದುಕೊಡದಂತೆ ಸೂಚಿಸಲಾಗಿದೆ. ಔಷಧಿ ಲಭ್ಯವಿಲ್ಲದಿದ್ದಲ್ಲಿ ವೈದ್ಯರೇ ತಂದುಕೊಡಬೇಕು ಎಂದು ಸೂಚಿಸಲಾಗಿದೆ ಎಂದರು.