ಸಕ್ರಿಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನಕ್ಕೆ ಚಾಲನೆ

ಬೆಳಗಾವಿ: 02 : ಕೇಂದ್ರ ಸಕರ್ಾರ ಹಾಗೂ ರಾಜ್ಯ ಸಕರ್ಾರವು ಭಾರತವನ್ನು ಕ್ಷಯಮುಕ್ತಗೊಳಿಸುವ ನಿಟ್ಟಿನಲ್ಲಿ ಭಾರತದಾದ್ಯಂತ ಕ್ಷಯಮುಕ್ತ ಸಮಾಜಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡಿದ್ದು ಕನರ್ಾಟಕ ರಾಜ್ಯಾದ್ಯಂತ ಜನವರಿ 2 ರಿಂದ 12 ರವರೆಗೆ ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಮನೆ ಮನೆಗೆ ಭೆಟ್ಟಿ ನೀಡಿ ಕ್ಷಯರೋಗ ಪತ್ತೆ  ಅಭಿಯಾನವನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದ್ದು, ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಬೆಳಗಾವಿ ನಗರದ ರಾಮನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಚಾಲನೆ ನೀಡಲಾಯಿತು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಹಾನಗರ ಪಾಲಿಕೆ ಬೆಳಗಾವಿ ಮಹಾಪೌರರು ಬಸಪ್ಪ ಸಿ. ಚಿಕ್ಕಲದಿನ್ನಿ ಇವರು ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬ ಸದಸ್ಯರು ಕೈಜೋಡಿಸಬೇಕೆಂದು ಕರೆ ನೀಡಿದರು. ಅಲ್ಲದೆ ರಾಮನಗರದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಫ ತಪಾಸಣೆ ಕೇಂದ್ರವನ್ನು ಉದ್ಘಾಟಿಸಿ ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. 

ಪಾಲಿಕೆ ಪರಿಷತ್ ಸದಸ್ಯರಾದ ಶ್ರೀಮತಿ. ಮೈನಾಬಾಯಿ ಚೌಗುಲಾ ಅವರು ಮಾತನಾಡಿ ಆರೋಗ್ಯ ಕಾರ್ಯಕರ್ತರು ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಎಲ್ಲರು ಒಗ್ಗೂಡಿ ನಗರ ಪ್ರದೇಶದ ಕೊಳಚೆ ಪ್ರದೇಶಗಳಲ್ಲಿ ಮೇಲಿಂದ ಮೇಲೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳುವದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಕ್ಷಯರೋಗದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸಬೇಕೆಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|| ಶೈಲಜಾ ತಮ್ಮಣ್ಣವರ ಅವರು ಬೆಳಗಾವಿ ಜಿಲ್ಲೆಯಲ್ಲಿ 1129 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ಒಟ್ಟಾರೆ 10.52 ಲಕ್ಷ ಜನಸಂಖ್ಯೆ  ಗುರುತಿಸಿ ಮನೆ-ಮನೆ ಭೆಟ್ಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಬೆಳಗಾವಿ ಜಿಲ್ಲೆಯ ಪ್ರತಿಶತ 20% ರಷ್ಟು ಜನಸಂಖ್ಯೆಯನ್ನು ತಲುಪಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಇದ್ದು, ಇದಕ್ಕಾಗಿ ಜಿಲ್ಲೆಯಾದ್ಯಾಂತ 1680 ನುರಿತ ಆರೋಗ್ಯ ಸಹಾಯಕರು ಹಾಗೂ ಆಶಾ/ಅಂಗನವಾಡಿ ಕಾರ್ಯಕತರ್ೆಯರನ್ನೊಳಗೊಂಡ ತಂಡಗಳನ್ನು ರಚಿಸಿ, ಪ್ರತಿ ತಂಡವು ಈ ಅವಧಿಯಲ್ಲಿ ಪ್ರತಿದಿನ 50 ರಿಂದ 60 ಮನೆಗಳನ್ನು ಭೇಟ್ಟಿ ಮಾಡಿ ಕುಟುಂಬದ ಎಲ್ಲ ಸದಸ್ಯರಿಗೆ ಕ್ಷಯರೋಗ ಕುರಿತು ಜಾಗೃತಿ ಮೂಡಿಸಿ ಕ್ಷಯರೋಗದ ಲಕ್ಷಣಗಳುಳ್ಳ ಕುಟುಂಬದ ಸದಸ್ಯರ ಕಫವನ್ನು ಸ್ಥಳದಲ್ಲಿಯೇ ಸಂಗ್ರಹಿಸಿ ತಪಾಸಣೆಗೆ ನಿಯೋಜಿತ ಕಫ ತಪಾಸಣಾ ಕೇಂದ್ರಕ್ಕೆ ಕಳುಹಿಸಿ, ತಪಾಸಿಸಿ ಕ್ಷಯರೋಗವಿದ್ದದು ಕಂಡು ಬಂದಲ್ಲಿ ಸ್ಥಳದಲ್ಲಿಯೇ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುವುದು. 

ಅದಲ್ಲದೇ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಕ್ಷ-ಕಿರಣ ತಪಾಸಣೆ ವ್ಯವಸ್ಥೆ ಮಾಡಿ ಸಂಶಯಾಸ್ಪದ ರೋಗಿಗಳ ಕ್ಷ-ಕಿರಣ ತಪಾಸಣೆ ಮಾಡಲಾಗುವುದು. ಹಾಗೂ ಕ್ಷ-ಕಿರಣ ಪರಿಕ್ಷೇಯಲ್ಲಿ ವಿಪರೀತ ಪಲಿತಾಂಶ ಬಂದ ಸಂಶಯಾಸ್ಪದ  ಕ್ಷಯರೋಗಿಗಳಿಗೆ ಸಿಬಿನ್ಯಾಟ್ (ತ್ವರಿತ ಕ್ಷಯರೋಗ ತಪಾಸಣಾ ಯಂತ್ರ) ಸೌಲಭ್ಯವನ್ನು ಜಿಲ್ಲೆಯ ಅಥಣಿ, ಗೋಕಾಕ, ಚಿಕ್ಕೋಡಿ, ಸವದತ್ತಿ ಹಾಗೂ ಬೆಳಗಾವಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ|| ಸಂಜಯ ಡುಮ್ಮಗೋಳ ಬೆಳಗಾವಿ ಇವರ ಮಾತನಾಡಿ ಬೆಳಗಾವಿ ನಗರದ ಜನರಲ್ಲಿ ಅರಿವು ಮೂಡಿಸಲು ವಿವಿಧ ಕಾಲೇಜು, ಅರೇ ಸಕಾರಿ ಸಂಸ್ಥೆಗಳು, ಸೇವಾ ಸಂಸ್ಥೆಗಳು, ಹಾಗೂ ಇನ್ನಿತರ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾಥರ್ಿಗಳು, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ|| ಜಗದೀಶ ಪಾಟ್ನೆ ವೈದ್ಯಾಧಿಕಾರಿಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ರಾಮನಗರ, ಸ್ವಾಗತಿಸಿದರು ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಯಲಿಗಾರ, ಹಿರಿಯ ಆರೋಗ್ಯ ಸಹಾಯಕ ಸಿ.ಜಿ.ಅಗ್ನಿಹೊತ್ರಿ, ವಸಂತ ಪಾತಳಿ, ಶ್ರೀಮತಿ. ದೀಪಾ ಕುಂದಗೋಳ ಬಿ.ಹೆಚ್.ಇ.ಓ. ಹಾಗೂ ಆರ್.ಎನ್.ಟಿ.ಸಿ.ಪಿ. ಸಿಬ್ಬಂದಿಯವರು, ಆಧಾರ ಎಜ್ಯೂಕೇಶನ್ ಸೋಸೈಟಿಯ ಬಸವಜ್ಯೋತಿ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾಥರ್ಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.