ದೇವರ ಹಿಪ್ಪರಗಿ 28: ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಮಸಿಬಿನಾಳ ಆರೋಪ ದೇವರ ಹಿಪ್ಪರಗಿ ಪಟ್ಟಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡದೆ ಇರುವುದು ವಿಪರ್ಯಾಸವೇ ಸರಿ ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಪ.ಪಂ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಆರೋಪಿಸಿದ್ದಾರೆ.
ಪಟ್ಟಣದ ವಾರ್ಡ ನಂ-13ರಲ್ಲಿ ರವಿವಾರದಂದು ಸುಮಾರು 3.5ಲಕ್ಷ ರೂ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈಗಾಗಲೇ ವಾರ್ಡಿನಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿದ್ದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ಹಾಗೂ ಪ.ಪಂ 15ನೇ ಹಣಕಾಸಿನ ಅನುದಾನದಲ್ಲಿ ವಾರ್ಡ್ನಲ್ಲಿ ಇರುವ ಹಲವಾರು ರಸ್ತೆಗಳ ದುರಸ್ತಿ ಸಿ.ಸಿ ರಸ್ತೆ ಚರಂಡಿ ಕುಡಿಯುವ ನೀರಿಗಾಗಿ ಬೋರ್ವೆಲ್, ಅವಶ್ಯವಿದ್ದ ಕಡೆ ವಿದ್ಯುತ್ ಕಂಬ ಸೇರಿದಂತೆ ಹಲವಾರು ಕಾರ್ಯಗಳನ್ನು ಮಾಡುವ ಮೂಲಕ ವಾರ್ಡ ಜನರ ಋಣ ತೀರಿಸುವ ಕೆಲಸ ಮಾಡಲಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ನೂತನ ಬಸ್ ನಿಲ್ದಾಣ ಪ.ಪಂ ನೂತನ ಕಟ್ಟಡ, ಸರ್ಕಾರಿ ಐಟಿಐ ಕಾಲೇಜ ಸೇರಿದಂತೆ ಹಲವಾರು ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಿದ್ದರು. ಇತ್ತೀಚಿಗೆ ಗ್ಯಾರಂಟಿ ಹೆಸರಿನಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರಿಗೆ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ನೂತನ ತಾಲೂಕು ಕೇಂದ್ರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನ ನೀಡಬೇಕು, ರಾಜ್ಯ ಸರ್ಕಾರ ಬಂದು ಎರಡು ವರ್ಷ ಗತಿಸಿದರು ಅನುದಾನ ನೀಡುವಲ್ಲಿ ತಾರತಮ್ಯ ಎಸಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರ ಪ್ರತಿನಿಧಿ ಬಸವರಾಜ ದೇವಣಗಾಂವ,ಪ.ಪಂ ಸದಸ್ಯರುಗಳಾದ ಕಾಸುಗೌಡ ಬಿರಾದಾರ ಜಲಕತ್ತಿ, ಶಾಂತಯ್ಯ ಜಡಿಮಠ, ಮುಖಂಡರಾದ ಸಬಲಯ್ಯ ಸದಯ್ಯನಮಠ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.