ಬೆಳಗಾವಿ 13: ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ 2024ನೇ ಸಾಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಬೆಳಗಾವಿಯ ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಅವರು ಮಾಡಿರುವ ಸಾಹಿತ್ಯ ಮತ್ತು ಸಾಮಾಜಿಕ ಸೇವೆ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಏಪ್ರಿಲ್ 14ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.