ನವದೆಹಲಿ, ಆಗಸ್ಟ್ 25 ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಭಾನುವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಅಂತಿಮ ನಮನ ಸಲ್ಲಿಸಿದರು. ಒಂದು ವಾರ ಐಸಿಯುನಲ್ಲಿದ್ದ ಜೇಟ್ಲಿ, ಶನಿವಾರ ಮಧ್ಯಾಹ್ನ ಏಮ್ಸ್ ನಲ್ಲಿ ನಿಧನರಾಗಿದ್ದರು. 66 ವರ್ಷದ ಅವರು ಉಸಿರಾಟದ ತೊಂದರೆ ಮತ್ತು ದೌರ್ಬಲ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಜೇಟ್ಲಿಯವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಯಮುನಾ ನದಿಯ ದಡದಲ್ಲಿರುವ ನಿಗಂಬೋಧ್ ಘಾಟ್ನಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.