ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾಗಿರುವ ಕ್ರಮ ಖಂಡಿಸಿ ಮನವಿ

ಬ್ಯಾಡಗಿ೨೭: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಳೆದ ಮೂವತ್ತು ವರ್ಷಗಳಿಂದ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ಸಣ್ಣಪುಟ್ಟ ವ್ಯಾಪಾರಸ್ಥರನ್ನು ಏಕಾಏಕಿ ಅಲ್ಲಿಂದ ತೆರವುಗೊಳಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿರುವ ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷ ಡಿ ಎಚ್. ಬುಡ್ಡನಗೌಡ್ರ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಅಲ್ಲಿಂದ ತೆರವುಗೊಳಿಸಬಾರದೆಂದು ಆಗ್ರಹಿಸಿದ್ದಾರೆ. 

ಈ ಕುರಿತು ಬುಧವಾರ ಹಳೇ ಪುರಸಭಾ ಕಾಯರ್ಾಲಯದ ಕಟ್ಟಡದ ಎದುರು ಬೀದಿ ಬದಿ ವ್ಯಾಪಾರಸ್ಥರ ಜೊತೆಗೂಡಿ ಅವರ ಪರವಾಗಿ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ನೆಪದಲ್ಲಿ ಬೀದಿ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾಗಿರುವ ಪುರಸಭೆಯ ಕ್ರಮ ಸರಿಯಲ್ಲ, ಈ ವ್ಯಾಪಾರಸ್ಥರಿಗೆ ಸೂಕ್ತ ಸ್ಥಳಾವಕಾಶ ನೀಡದೆ ಅವರ ಗೂಡಂಗಡಿಗಳನ್ನು ತೆಗೆದು ಹಾಕಿರುವುದು ಬೀದಿ ಬದಿ ವ್ಯಾಪಾರಸ್ಥರ ಮೇಲೆ ದೌರ್ಜನ್ಯ ತೋರಿದಂತಾಗಿದೆ. ಈ ಕೂಡಲೇ ಬೀದಿ ಬದಿ ವ್ಯಾಪಾರಸ್ಥರ ಹಿತ ರಕ್ಷಣೆಯನ್ನು ಕಾಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಅವರನ್ನು ಒತ್ತಾಯಿಸಿದ್ದಾರೆ. 

ಬೀದಿ ಬದಿ ವ್ಯಾಪಾರಸ್ಥರ ಪರವಾಗಿ ಮಾತನಾಡಿದ ಮೋಹನ ಹಿರೇಮಠ, ಸಣ್ಣಪುಟ್ಟ ವ್ಯಾಪಾರದಲ್ಲಿ ಕುಟುಂಬ ನಿರ್ವಹಣೆ ಮಾಡುತ್ತಿರುವ ನಮಗೆ ಪುರಸಭೆಯು ಏಕಾಏಕಿ ನಮ್ಮ ಗೂಡಂಗಡಿಗಳ ಮೇಲೆ ತೆರವುಗೊಳಿಸುವ ಕ್ರಮಕ್ಕೆ ಮುಂದಾಗಿರುವುದು ನಮ್ಮೆಲ್ಲರ ಹೊಟ್ಟೆ ಮೇಲೆ ಕಲ್ಲು ಹೊಡೆದಂತಾಗಿದೆ ಎಂದು ತಮ್ಮ ಗೋಳನ್ನು ವ್ಯಕ್ತಪಡಿಸಿದರು. 

ಮನವಿಯನ್ನು ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಶರಣಮ್ಮ ಕಾರಿ, ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಅವರೊಂದಿಗೆ ಚಚರ್ಿಸಿ ತೀಮರ್ಾನ ಕೈಗೊಳ್ಳುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರಾದ ಫಕ್ಕೀರಪ್ಪ ಕಡಕೋಳ, ಮಹಬೂಬಸಾಬ್, ರಫೀಕ್, ದೇವರಾಜ ಹೊಸಮನಿ, ಚನ್ನಬಸವನಗೌಡ, ಕಾಂಗ್ರೆಸ್ ಮುಖಂಡರಾದ ಖಾದರಸಾಬ ದೊಡ್ಡಮನಿ, ಪ್ರಕಾಶ ಬಣಕಾರ, ಪ್ರಕಾಶ ಲಮಾಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು