ಸರ್ಕಾರದ ಯೋಜನೆಗಳ ಬಗ್ಗೆ ಜನ ಜಾಗೃತಿ

ಗದಗ 06: ವಾರ್ತಾ  ಮತ್ತು  ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರೋಣ ತಾಲೂಕಿನ ಗುಳಗುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಗ್ರಾಮ ಸಂಪರ್ಕ ಯೋಜನೆಯಡಿ  ಜಾನಪದ ಸಂಗೀತ ಹಾಗೂ ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಗಳ  ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಜಾನಪದ ವಾದ್ಯ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಿಕ್ಷಕ ಸಿ.ಬಿ.ದೇಸಾಯಿ ಅವರು,  ಸಕರ್ಾರ ಜನರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಪ್ರತಿಯೊಬ್ಬರು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಹತ್ತು ಹಲವು ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾರ್ತಾ  ಇಲಾಖೆಯು ಕೈಗೊಂಡಿರುವ ಈ ವಿನೂತನ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದರು.

ಬಸವ ಬಳಗ ಜಾನಪದ ಕಲಾತಂಡ ಕೋತಬಾಳ ಹಾಗೂ ಜೈ ಭೀಮ ಗೀಗಿಮೇಳ ಕಲಾತಂಡ ನೀಲಗುಂದ ತಂಡದವರು ರಾಜ್ಯ ಸರ್ಕಾರ ನೇಕಾರ ಮತ್ತು ಮೀನುಗಾರರ ಸಾಲಮನ್ನಾ, ರೈತ ಸಮ್ಮಾನ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕ ಹೆಚ್ಚುವರಿ 4 ಸಾವಿರ ರೂ. ನೀಡುತ್ತಿರುವ ಸರ್ಕಾರದ ಸೌಲಭ್ಯಗಳು ಸೇರಿದಂತೆ ಶಾಲೆ ಹಾಗೂ ಗ್ರಾಮದ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಾತರ್ಾ ಇಲಾಖೆಯ ಸಿಬ್ಬಂದಿ ಎಮ್.ಟಿ.ನೇಮರಾಜ, ಸಕರ್ಾರದಿಂದ ಹಲವಾರು ಜನಪರ ಯೋಜನೆಗಳು ಜಾರಿಯಲ್ಲಿದ್ದು, ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಲಭ್ಯವಿರುವ ಯೋಜನೆಗಳ ಬಗ್ಗೆ ತಿಳಿದು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ವಿದ್ಯಾರ್ಥಿನಿ ಅಕ್ಷತಾ ಸೊಂಟಿ ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಶಾಲೆಯ ಪ್ರಧಾನ ಗುರುಗಳಾದ ಎಸ್.ವಾಯ್.ದಾಸರ, ಸಹಶಿಕ್ಷಕರಾದ ಡಿ.ರುದ್ರಮುನಿ, ಈ.ಎಸ್.ಚಿನ್ನೂರ, ಕೆ.ಎಚ್.ಮುಜಾವರ, ಕೆ.ಆಯ್.ವಸ್ತಾದ, ಶಿಕ್ಷಕಿ ಕಮಲಾಕ್ಷಿ  ಹಾಗೂ ವಿದ್ಯಾರ್ಥಿಗಳು ಇದ್ದರು.