15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಮಾಜಿ ರಾಜ್ಯಾಧ್ಯಕ್ಷ ಹೊಸಳ್ಳಿ

ಲೋಕದರ್ಶನ ವರದಿ

ಕೊಪ್ಪಳ 08: ರಾಜ್ಯದಲ್ಲಿ ಅನಿವಾರ್ಯವಾಗಿ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮೀಶ್ರ ಸರಕಾರದ ದುರಾಡಳಿತಕ್ಕೆ ಬೇಸತ್ತು ಹಾಗೂ ಸಮ್ಮೀಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ಕೂಡಲೇ ಎಚ್.ಡಿ.ಕುಮಾರಸ್ವಾಮಿಯವರ ಸರ್ವಾಧಿಕಾರಕ್ಕೆ ಮೊದಲು ಕಾಂಗ್ರೆಸ್ನಲ್ಲಿ ಭಿನ್ನಮತ ನಂತರ ಜೆಡಿಎಸ್ನಲ್ಲಿ ಶಾಸಕರ ರಾಜಿನಾಮೆಯಿಂದ ಈಗ ರಾಜ್ಯದಲ್ಲಿ ಉಪ ಚುನಾವಣೆ ಬರಲು ಕಾರಣ ಈಗ ರಾಜ್ಯದ 15ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಮಾಜಿ ರಾಜ್ಯಾಧ್ಯಕ್ಷ ಪೀರಾಹುಸೇನ ಹೊಸಳ್ಳಿ ವಕೀಲರು ತಿಳಿಸಿದ್ದಾರೆ.

ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಂ ಆಗಿದ್ದ ಕುಮಾರಸ್ವಾಮಿಯವರ ಕುಟುಂಬದಿಂದ ಬೇಸತ್ತು ಕಾಂಗ್ರೆಸ್ ಪಕ್ಷ ಬೆಂಬಲ ವಾಪಾಸ್ ಪಡೆಯುವಷ್ಟರಲ್ಲಿ ಅನೇಕ ಶಾಸಕರು ರಾಜಿನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲು ಕಾರಣವಾಯಿತು.

ನಂತರ ರಾಜ್ಯದ 15 ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಬಂತು, ಈ ಎಲ್ಲಾ ಕ್ಷೇತ್ರಗಳಲ್ಲಿ ಸರ್ವಸಮ್ಮತದಿಂದ ಅಲ್ಪಸಂಖ್ಯಾತರು ಅಸಕ್ತಿಯಿಂದ ಬಿಜೆಪಿ ಬೆಂಬಲಿಸಿದ್ದರಿಂದ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.