ಹಾನಗಲ್ ಜನಸಂಪರ್ಕ ಕಚೇರಿಯಲ್ಲಿ ನಡೆದ ಬಸವ ಜಯಂತಿ

Basava Jayanti held at Hangal Public Relations Office

ಲೋಕದರ್ಶನ ವರದಿ 

ಹಾನಗಲ್ ಜನಸಂಪರ್ಕ ಕಚೇರಿಯಲ್ಲಿ ನಡೆದ ಬಸವ ಜಯಂತಿ  

ಹಾನಗಲ್  01:   ಜಾತಿ, ಜಾತಿಗಳ, ಧರ್ಮ, ಧರ್ಮಗಳ ಹೆಸರಿನಲ್ಲಿ ನಡೆಯುತ್ತಿದ್ದ ಮಾನವ ಸಂಘರ್ಷ ತಪ್ಪಿಸಲು 12 ನೇ ಶತಮಾನದ ಸಂದರ್ಭದಲ್ಲಿಯೇ ಜನಜಾಗೃತಿಗೆ ಮುಂದಾಗಿದ್ದ ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳು ಇಂದಿಗೂ, ಎಂದಿಗೂ ಪ್ರಸ್ತುತ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. 

  ಬುಧವಾರ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕಾಡಳಿತ ಆಯೋಜಿಸಿದ್ದ ಬಸವ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಸವಣ್ಣ ಬಾಲ್ಯದಲ್ಲಿಯೇ ಚಿಂತನಶೀಲರಾಗಿದ್ದು ಗೊಡ್ಡು ಸಂಪ್ರದಾಯಗಳನ್ನು ಪ್ರಶ್ನಿಸುವ, ಪ್ರತಿಭಟಿಸುವ ಗುಣ ಹೊಂದಿದ್ದರು. ಶ್ರೇಷ್ಠ ರಾಜನೀತಿಜ್ಞ, ತತ್ವಜ್ಞಾನಿಯಾಗಿದ್ದ ಅವರು ವಚನಗಳ ಮೂಲಕ ಸಮಾಜದ ಅಂಕು, ಡೊಂಕು ತಿದ್ದಲು ಪ್ರಯತ್ನಿಸಿದರು ಎಂದು ಹೇಳಿದ ಅವರು ಆ ದಿನಗಳಲ್ಲಿಯೇ ಬಸವಣ್ಣನ ನೇತೃತ್ವದಲ್ಲಿ ಜಾತಿ ಬೇಧ, ಲಿಂಗ ಬೇಧವಿಲ್ಲದ ಸಮ ಸಮಾಜ ನಿರ್ಮಾಣದ ಕೆಲಸ ನಡೆದಿತ್ತು. ನಮ್ಮ ದೇಶದ ಸಂವಿಧಾನದ ಆಶವೂ ಇದೇ ಆಗಿದೆ. ಬಸವಣ್ಣನ ತತ್ವದ ಆಧಾರದಲ್ಲಿ ರಾಜ್ಯ ಸರ್ಕಾರ ಮುನ್ನಡೆದಿದ್ದು ದಾಸೋಹದ ಪರಿಕಲ್ಪನೆಯ ಸಾಕಾರಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರ ಅಳವಡಿಕೆಗೆ ಕ್ರಮ ಕೈಗೊಂಡಿದೆ ಎಂದರು. 

  ಇದಕ್ಕೂ ಮೊದಲು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ವಿರಕ್ತಮಠದ ಆವರಣದಲ್ಲಿನ ಬಸವೇಶ್ವರ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಪುತ್ಥಳಿಗೆ ಗೌರವಾರ​‍್ಿಸಿದರು. 

  ತಹಶೀಲ್ದಾರ್ ರೇಣುಕಾ ಎಸ್‌., ಅಖಿಲ ಭಾರತ ವೀರಶೈವ ಮಹಾಸಭೆಯ ತಾಲೂಕಾಧ್ಯಕ್ಷ ಶಿವಕುಮಾರ ದೇಶಮುಖ, ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಕೆಎಂಎಫ್ ನಿರ್ದೇಶಕ ಚಂದ್ರ​‍್ಪ ಜಾಲಗಾರ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಮೆಹಬೂಬ ಬ್ಯಾಡಗಿ, ಮಮತಾ ಆರೆಗೊಪ್ಪ, ಈರಣ್ಣ ಬೈಲವಾಳ, ಭರಮಣ್ಣ ಶಿವೂರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 


ಫೋಟೊ: 

ಸಿ ಹಾನಗಲ್‌ನಲ್ಲಿ ಬಸವ ಜಯಂತಿ ಅಂಗವಾಗಿ ಬಸವೇಶ್ವರರ ಪುತ್ಥಳಿಗೆ ಶಾಸಕ ಶ್ರೀನಿವಾಸ ಮಾನೆ ಗೌರವಾರ​‍್ಿಸಿದರು. 

ಸಿ ಹಾನಗಲ್‌ನಲ್ಲಿ ಬಸವ ಜಯಂತಿ ಅಂಗವಾಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಸವ ಜಯಂತಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿದ್ದರು. 

ಸಿ ಹಾನಗಲ್‌ನಲ್ಲಿ ಬಸವ ಜಯಂತಿ ಅಂಗವಾಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಸವ ಜಯಂತಿಯಲ್ಲಿ ಭಾಗವಹಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. 

ಸಿ ಹಾನಗಲ್ ಜನಸಂಪರ್ಕ ಕಚೇರಿಯಲ್ಲಿ ನಡೆದ ಬಸವ ಜಯಂತಿಯಲ್ಲಿ ಶಾಸಕ ಶ್ರೀನಿವಾಸ ಮಾನೆ ಪಾಲ್ಗೊಂಡಿದ್ದರು.