ಏ.30ರಂದು ಬಸವ ಜಯಂತಿ ಕಾರ್ಯಕ್ರಮ ಆಚರಣೆ

Basava Jayanti program to be celebrated on April 30

ವಿಜಯಪುರ,ಏ.19: ಏಪ್ರಿಲ್ 30ರಂದು ಬಸವ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.  

ಶನಿವಾರ ಅಪರ ಜಿಲ್ಲಾಧಿಕಾರಿ  ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ  ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವ ಜಯಂತಿ ಅಂಗವಾಗಿ ಏಪ್ರಿಲ್ 30ರ ಬೆಳಿಗ್ಗೆ  08 ಗಂಟೆಗೆ ನಗರದ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಮಾಲಾರೆ​‍್ಣ, ಬೆಳಿಗ್ಗೆ 09 ಗಂಟೆಗೆ  ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಜಾನಪದ  ಕಲಾ ತಂಡಗಳೊಂದಿಗೆ ಶ್ರೀ ಬಸವೇಶ್ವರ ಅವರ ಭಾವಚಿತ್ರದ ಮೆರವಣಿಗೆ ಹಾಗೂ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರಿ​‍್ಡಸಲು ನಿರ್ಧರಿಸಲಾಯಿತು. 

ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರಿ​‍್ಡಸಲು ನಿರ್ಧರಿಸಲಾಯಿತು. ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಯಿತು. 

ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಬದುಕು, ಸಂದೇಶ ಮತ್ತು ಚಿಂತನೆಗಳನ್ನು ನಾಡಿನಾದ್ಯಂತ ವ್ಯಾಪಕವಾಗಿ ಪ್ರಚುರಪಡಿಸುವ ನಿಟ್ಟಿನಲ್ಲಿ ‘ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಯು_ ಕಲಬುರಗಿ ಜಿಲ್ಲೆಯಿಂದ ನಮ್ಮ ಜಿಲ್ಲೆಗೆ ಏಪ್ರಿಲ್ 24ರಂದು ಆಗಮಿಸಲಿದೆ. ಜಿಲ್ಲೆಗೆ ಆಗಮಿಸುವ ರಥಯಾತ್ರೆಗೆ ಭವ್ಯ ಸ್ವಾಗತ ಕೋರುವ ಹಿನ್ನೆಲೆಯಲ್ಲಿ   ಈ ಸಂದರ್ಭದಲ್ಲಿ ಎಲ್ಲರೂ ಉಪಸಿತರಿರುವಂತೆ ಸಭೆಯಲ್ಲಿ ಸೂಚಿಸಲಾಯಿತು. 

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಡಿ.ವೈಎಸ್ಪಿ ಬಸವರಾಜ ಎಲಿಗಾರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್‌.ಕೋಲಾರ, ಹಿಂಧುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಖಾರಿ ದೀಪಕ, ಕ್ರೀಡಾದಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಅನಸೂಯಾ ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.