ಬಸವಣ್ಣನವರ ತತ್ವ, ಆದರ್ಶಗಳು ಬದುಕಿಗೆ ದಾರಿ: ಸಿ ಎಸ್ ನಾಡಗೌಡ

Basavannavar's principles and ideals are the way to life: C.S. Nadagowda

ಮುದ್ದೇಬಿಹಾಳ 01: 12ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣನವರು. ಅವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿ. ಈ ಮಹಾನ್ ಕವಿ, ಸಮಾಜ ಸುಧಾರಕ, ತತ್ವಜ್ಞಾನಿಯ ಜನ್ಮ ಜಯಂತಿಯನ್ನು ಪ್ರತಿವರ್ಷ ಆಚರಿಸುವೂದೇ ನಮ್ಮೇಲ್ಲರ ಸೌಭಾಗ್ಯ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಹೇಳಿದರು. 

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಆಡಳಿತ ಹಾಗೂ ಲಿಂಗಾಯತ ವೀರಶೈವ ಸಮಾಜಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅಕ್ಷಯ ತೃತೀಯಾ ಬಸವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಜಗಜ್ಯೋತಿ ಅಶ್ವಾರೂಢ ಬಸವೇಶ್ವರರ ಪುತ್ಥಳಿಗೆ ಮಾಲಾರೆ​‍್ಣ ಪೂಜೆ ಸಲ್ಲಿಸುವ ಮೂಲಕ ಅವರು ಮಾತನಾಡಿದರು. 

 ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಸಂದೇಶ ಸಾರಿದ ಮಹಾನ್ ಸಮಾಜ ಸುಧಾರಕ ಬಸವೇಶ್ವರರು. ದಯೆಯೇ ಧರ್ಮದ ಮೂಲವಯ್ಯ ದಯೆಯಿಲ್ಲದ ಧರ್ಮ ಯಾವುದಯ್ಯ ದಯೆ ಬೇಕು ಸಕಲ ಪ್ರಾಣಿಗಳೆಲ್ಲರಲಿ ದಯೆಯೇ ಧರ್ಮದ ಮೂಲವಯ್ಯ_ ಹೀಗೆ ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು.  ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮೂಲಕ ಸಮಾಜದಲ್ಲಿ ಹಲವಾರು ಸುಧಾರಣೆಗಳನ್ನು ತಂದರು. ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ವಿಶ್ವ ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿಯಾಗಿವೆ.  

ಬಸವಣ್ಣವರ ಬಗ್ಗೆ ಹೊಗಳಿದರೆ ಸಾಲದ ಅವರ ಆದರ್ಶಗುಣಗಳನ್ನು ನಾವೇಲ್ಲ ರೂಢಿಸಿಕೊಂಡಾಗ ಮಾತ್ರ ಅವರ ಜಯಂತ್ಯೋತ್ಸವ ಆಚರಣೆ ಮಾಡಿದ್ದಕ್ಕೆ ಸಾರ್ಥಕಗೊಳ್ಳುತ್ತದೆ ಎಂದರು. 

ತಹಶಿಲ್ದಾರ ಬಲರಾಮ ಕಟ್ಟಿಮನಿ, ಸಿಪಿಐ ಮಹ್ಮದಫಸಿವುದ್ದಿನ, ಪಿಎಸೈ ಸಂಜಯಕುಮಾರ ತಿಪ್ಪಾರೆಡ್ಡಿ,  ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಸ್ ಸಾವಳಗಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ತಾಲೂಕಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಮುಖಂಡರಾದ ಸಂಗನಗೌಡ ಬಿರಾದಾರ(ಜಟಿಸಿ) ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಶ್ರೀಕಾಂತ ಚಲವಾದಿ, ಗೋಪಿ ಮಡಿವಾಳರ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸದಸ್ಯೆಯರಾದ ಭಾರತಿ ಪಾಟೀಲ, ಸಹನಾ ಬಡಿಗೇರ, ಗಣೇಶ ಅನ್ನಗೋನಿ, ಸಂಗಣ್ಣ ಮೇಲಿನಮನಿ ಸೇರಿದಂತೆ ಹಲವರು ಇದ್ದರು.