ಸರ್ವಾಂಗೀಣ ಅಭಿವೃದ್ಧಿಗಾಗಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ

ಲೋಕದರ್ಶನವರದಿ

ರಾಣೇಬೆನ್ನೂರು: ತಾಲೂಕಿನ ಸವರ್ಾಂಗೀಣ ಅಭಿವೃದ್ಧಿಗಾಗಿ ಸರಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಸೇವಕರಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಿದೆ. ನಾನೂ ಕೂಡ ಶಾಸಕನಲ್ಲ ಸೇವಕ ಎಂಬ ಮನೋಭಾವನೆಯಿಂದ ನಿಮ್ಮ ಜೊತೆಗಿರುತ್ತೇನೆ. ನಾವು ನೀವು ಸಹಕರಿಸಿ ಅಭಿವೃದ್ಧಿಯತ್ತ ದಾಪುಗಾಲು ಹಾಕಬೇಕು. ನಾನು ಯಾವ ಅಧಿಕಾರಿಗಳಿಗೂ ತೊಂದರೆ ಕೊಡುವವನಲ್ಲ. ನಾನು ನಿಮ್ಮಿಂದ ಪ್ರಾಮಾಣಿಕ ಸೇವೆಯನ್ನು ಮಾತ್ರ ಬಯಸುತ್ತೇನೆ ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.

  ಮಂಗಳವಾರ ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದಾದ್ಯಂತ ಮೂಲಭೂತ ಸೌಲಭ್ಯಗಳೂ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಹಿನ್ನಲೆಯಲ್ಲಿ ವಿವರವಾದ ಪಟ್ಟಿಯ ಮೂಲಕ ಕ್ರೀಯಾಯೋಜನೆಯನ್ನು ತಯಾರಿಸಿ ನನಗೆ ನೀಡಿದರೆ ಅದೆಲ್ಲವನ್ನೂ ಕ್ರೋಡೀಕರಿಸಿ ಮುಖ್ಯಮಂತ್ರಿಗಳಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲು ಸಹಕಾರಿಯಾಗುತ್ತದೆ ಎಂದರು.

  ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಪ್ರಾಥಮಿಕ ಆರೋಗ್ಯಕೇಂದ್ರ ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿರುವ ಕೆಲ ಆಸ್ಪತ್ರೆಗಳಲ್ಲಂತೂ ಅವ್ಯವಸ್ಥೆಯ ಆಗರವಾಗಿದೆ. ನಗರದಲ್ಲಿರುವ ಮರಣೋತ್ತರ ಪರೀಕ್ಷಾ ಕೊಠಡಿಯನ್ನು ಸ್ವಚ್ಛತೆ ಮಾಡಬೇಕು. ಸಿಬ್ಬಂದಿ ಕೊರತೆಯ ಕುರಿತು ನನಗೆ ಮಾಹಿತಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗೆ ಸೂಚಿಸಿದರು.  

  ದನದ ಮಾಕರ್ೆಟ್ನಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ದನದಿಂದ ಸಂಗ್ರಹವಾಗುವ ಸಗಣಿಯನ್ನು ಹರಾಜು ಮಾಡಬೇಕು ಎಂದು ಎಪಿಎಂಸಿ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಮತ್ತು ಲೋಕೋಪಯೋಗಿ ಇಲಾಖೆಗಳ ವತಿಯಿಂದ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಕ್ಕಪಕ್ಕದಲ್ಲಿರುವ ಮುಳ್ಳಿನ ಗಿಡಗಳ ಕಟಾವು ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು. ಅಡಕೆ ಮತ್ತು ರೇಷ್ಮೆ ಬೆಳೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಮೂಲಕ ರೈತರಿಗೆ ಸಹರಿಸಬೇಕು. ಅಪ್ಪರ್ ತುಂಗಾ ಕಾಲುವೆ ನಿಮರ್ಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

  ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಅಭ್ಯಸಿಸಲು ಬರುವ ಮತ್ತು ಹೋಗುವ ವಿದ್ಯಾಥರ್ಿಗಳಿಗೆ ಯಾವುದೇ ರೀತಿಯ ಬಸ್ನ ಅನಾನುಕೂಲತೆ ಆಗಬಾರದು. ಜೊತೆಗೆ ಬಸ್ಗಳು ವಿಳಂಬವಾದಲ್ಲಿ ಇನ್ನೊಂದು ಬಸ್ನ ವ್ಯವಸ್ಥೆ ಮಾಡಲು ಮುಂದಾಗಬೇಕು ಎಂದು ಸಾರಿಗೆ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಮದ್ಯ ಮಾರಾಟ ನಿಯಂತ್ರಿಸಬೇಕು. ಯಾವುದೇ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ನಿಗಾವಹಿಸಿ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆಗಿ ಎಚ್ಚರಿಸಿದರು.    ತಾಪಂ ಇಓ ಎಸ್.ಎಂ.ಕಾಂಬಳೆ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ಸಮಾಜಿಕ ನ್ಯಾಯಸಮಿತಿ ಅಧ್ಯಕ್ಷ ರಾಜು ಸುವರ್ೆ, ತಹಶೀಲ್ದಾರ ಬಸವರಾಜ ಕೋಟೂರ, ತಾಪಂ ವ್ಯವಸ್ಥಾಪಕ ಬಸವರಾಜ ಶಿಡೇನೂರ ಸೇರಿದಂತೆ ಮತ್ತಿತರರು ಇದ್ದರು