ಬೆಳಗಾವಿ ಅಧಿವೇಶನ : ಬೆಳಗಾವಿ-ಬೆಂಗಳೂರು ವಿಮಾನ ಸಂಚಾರವನ್ನು ಪ್ರಾರಂಭ
ಬೆಳಗಾವಿ 05: ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದ ನಿಮಿತ್ತ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು 09 ಡಿಸೆಂಬರ್ 2024 ರಿಂದ 19 ಡಿಸೆಂಬರ್ 2024ರ ವರೆಗೆ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರವನ್ನು ಪ್ರಾರಂಭ ಮಾಡಲು ನಿರ್ಧರಿಸಿದೆ ಮತ್ತು ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಬೆಳಗಾವಿ ಮತ್ತು ಬೆಂಗಳೂರು ನಡುವೆ ಪ್ರಯಾಣಿಸುವ ಜನಪ್ರತಿನಿಧಿಗಳು, ವ್ಯಾಪಾರಿಗಳು, ವೃತ್ತಿಪರರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮನವಿ ಮಾಡಲಾಗಿತ್ತು. ನನ್ನ ಮನವಿಗೆ ಸ್ಪಂಧಿಸಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರ ನಡೆಸಲಿದೆ. ಈ ವಿಮಾನಯಾನ ಸೇವೆ ಸೌಲಭ್ಯವನ್ನು ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿಸಿದರು.ಇಂಡಿಗೋ ಏರ್‌ಲೈನ್ಸ್ ಸಂಸ್ಥೆಗೆ ಜಿಲ್ಲೆಯ ಜನತೆ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.