ಬಳ್ಳಾರಿ: ಸ್ವಚ್ಛ ಸೇವಾ ಸಪ್ತಾಹ

ಲೋಕದರ್ಶನ ವರದಿ

ಬಳ್ಳಾರಿ 16: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ನಗರದ ವಿಮ್ಸ್ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸ್ವಚ್ಛ ಸೇವಾ ಸಪ್ತಾಹ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಪಾಲ್ಗೊಂಡು ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.

ಪೊರಕೆ ಹಿಡಿದು ಕಸಗೂಡಿಸುವ ಈ ಸ್ವಚ್ಚತಾ ಸೇವಾದಲ್ಲಿ ಸಂಸದ ವೈ.ದೇವೇಂದ್ರಪ್ಪ, ಮಾಜಿ ಸಂಸದ ಸಣ್ಣ ಫಕೀರಪ್ಪ, ಮಾಜಿ ಶಾಸಕ ಸುರೇಶಬಾಬು, ವಿಮ್ಸ್ ನಿದರ್ೆಶಕ ಎಲ್.ಎನ್.ರೆಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡು ಸ್ವಚ್ಚಗೊಳಿಸಿದರು.

ನಂತರ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ಪ್ರಧಾನಮಂತ್ರಿಗಳ ಜನ್ಮದಿನಾಚರಣೆ ನಿಮಿತ್ತ ಸೆ.14ರಿಂದ 21ರವರೆಗೆ ದೇಶದಾದ್ಯಂತ ಸ್ವಚ್ಚತಾ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಇಡೀ ಜೀವನವನ್ನೇ ದೇಶಕ್ಕಾಗಿ ಮೀಸಲಿಟ್ಟಿರುವ ಪ್ರಧಾನಮಂತ್ರಿಗಳು ನೂರಾರು ವರ್ಷಗಳ ಕಾಲ ಸುಖವಾಗಿರಲಿ ಎಂದರು.

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು, ಸಚಿವರು ತುಂಬಾ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಮುಖಂಡರೊಂದಿಗೆ ಚಚರ್ಿಸಿ ತೀಮರ್ಾನಿಸಲಾಗುವುದು; ಇದರಲ್ಲಿ ವೈಯಕ್ತಿಕ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.

ವಿಮ್ಸ್ ದುರಸ್ಥಿ ಮತ್ತು ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂನರ್ಾಲ್ಕು ದಿನಗಳಲ್ಲಿ ಸಭೆ ಕರೆಯಲಾಗುವುದು ಎಂದು ಸಚಿವ ಶ್ರೀರಾಮುಲು ಹೇಳಿದರು.