ಲೋಕದರ್ಶನ ವರದಿ
ಬಳ್ಳಾರಿ 20: ಮಕ್ಕಳ ರಕ್ಷಣೆ, ಶಿಕ್ಷಣ ನೀಡುವಿಕೆ ಮತ್ತು ಆರೋಗ್ಯ ಜೊತೆಗೆ ಮಕ್ಕಳ ಹಕ್ಕುಗಳನ್ನು ಕಾಪಾಡಲು ಮತ್ತು ಅವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಆಂತೋನಿ ಸಬಾಸ್ಟೈನ್ ಅವರು ಹೇಳಿದರು.
ಕರ್ನಾ ಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ದಾಖಲಾತಿ (ಶಾಲೆ ಕಡೆ ನನ್ನ ನಡೆ) ಹಾಗೂ ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ -2009ರ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ನಿಖರ ಅಂಕಿ ಅಂಶಗಳ ಮಾಹಿತಿಯನ್ನು ಪಡೆದುಕೊಂಡು ಸದರಿ ಮಕ್ಕಳನ್ನು ಶಾಲೆ ದಾಖಲಾತಿ ಮಾಡುವ ಕೆಲಸವನ್ನು ಮಾಡಬೇಕು. ಸಮೀಕ್ಷೆಯಲ್ಲಿ ತಪ್ಪು ಮಾಹಿತಿಯನ್ನು ನೀಡಬಾರದು. ತಪ್ಪ ಮಾಹಿತಿ ನೀಡಿದರೇ ತಾವೇ ಹೊಣೆಗಾರರಾಗುತ್ತೀರಿ ಎನ್ನುವ ಮೂಲಕ ಎಚ್ಚರಿಕೆ ನೀಡಿದ ಅವರು ಅಧಿಕಾರಿಗಳು ಪ್ರತಿಯೊಬ್ಬರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದಿರಿ ಎಂದರು.
ಶಾಲೆಗಳಿಗೆ ನೀಡಿದ ಅನುದಾನವನ್ನು ಸರ್ಮಪಕವಾಗಿ ಬಳಕೆ ಮಾಡಬೇಕು ಮತ್ತು ಮಕ್ಕಳಿಗೆ ಸಿಗುವ ಸೌಲಭ್ಯವನ್ನು ಅವರಿಗೆ ಸಿಗುವಂತೆ ನೋಡಿಕೊಳ್ಳಬೇಕು. ಅನುದಾನ ದುರ್ಬಳಕೆ ಮಾಡಿಕೊಂಡದ್ದು ಕಂಡುಬಂದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳ ವಿತರಣೆ ಮಾಡಿ, ಶಾಲಾ ಹಂತದಲ್ಲಿ ಶೂ ಗಳನ್ನು ಖರೀದಿ ಮಾಡಿ ಮಕ್ಕಳಿಗೆ ವಿತರಣೆ ಮಾಡಬೇಕು ಎಂದರು.
ಸಂಡೂರು, ಸಿರುಗುಪ್ಪ, ಕೂಡ್ಲಿಗಿ ತಾಲೂಕುಗಳಲ್ಲಿ ಶಿಕ್ಷಣದ ಮೌಲ್ಯ ಹೆಚ್ಚುಸುವಲ್ಲಿ ತರಬೇತಿ ಪಡೆದ ಅತಿಥಿ ಶಿಕ್ಷಕರನ್ನು ನೇಮಕಮಾಡಿ ಎಂದು ಹೇಳಿದ ಅಧ್ಯಕ್ಷ ಅಂತೋನಿ ಅವರು ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಮಾಹಿತಿ ಪಡೆದರು ಮತ್ತು ದುರಸ್ತಿಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಶಿಥಿಲಗೊಂಡ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಹೇಳದೇ ಸುರಕ್ಷಿತವಿರುವ ಕಡೆ ಪಾಠ ಮಾಡಿ ಎಂದರು.
ಶೌಚಾಲಯ ಮತ್ತು ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಶಾಲೆಯಲ್ಲಿ ಕಲ್ಪಿಸಿ; ಮಕ್ಕಳು ಗೈರು ಹಾಜರಾದಲ್ಲಿ ಸಂದರ್ಭದಲ್ಲಿ ಗೈರು ಹಾಜರಾದ ಮಕ್ಕಳ ಮಾಹಿತಿ ಪಡೆದುಕೊಂಡು ಪಿಡಿಒಗಳಿಗೆ ಮಾಹಿತಿಯನ್ನು ಒದಗಿಸಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸ್ಥಳೀಯ ಪಿಡಿಒಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಶಾಲೆಗೆ ಬಂದತಹ ಪೀಠೋಪಕರಣಗಳು ಹಾಗೂ ಪಠ್ಯಪುಸ್ತಕಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಪರಶುರಾಮ್, ಎಚ್.ಸಿ.ರಾಘವೇಂದ್ರ, ಡಿಡಿಪಿಐ ಶ್ರೀಧರನ್, ಜಿಲ್ಲಾ ಕಾರ್ಮಿ ಕ ಅಧಿಕಾರಿ ಚಂದ್ರಶೇಖರ ಐಲಿ ಸೇರಿದಂತೆ ಬಿಇಒ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.