ಬಳ್ಳಾರಿ: ಸಚಿವ ಶಿವರಾಜ ತಂಗಡಗಿ ಅವರ ಪ್ರವಾಸ

Bellary: Minister Shivaraj Thangadagi's tour

ಬಳ್ಳಾರಿ  14: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ ಅವರು ಮೇ 15 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.  

ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲೆಯ ಕಾರಟಗಿಯಿಂದ ಹೊರಟು, ಮಧ್ಯಾಹ್ನ 01 ಗಂಟೆಗೆ ಸಂಡೂರು ಪಟ್ಟಣಕ್ಕೆ ಆಗಮಿಸುವರು.ಬಳಿಕ ಸಂಡೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಜ್ಯ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಸಮಾರಂಭದ ಪ್ರಯುಕ್ತ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. 

ನಂತರ ಮಧ್ಯಾಹ್ನ 02 ಗಂಟೆಗೆ ಕಾರಟಗಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.