ಬಳ್ಳಾರಿ: ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್ ಹಿಂದುರಿಗಿಸಲು ಸೂಚನೆ

ಲೋಕದರ್ಶನ ವರದಿ

ಬಳ್ಳಾರಿ 23: ಅನರ್ಹರು ಹೊಂದಿರುವ ಅಂತ್ಯೋದಯ ಆದ್ಯತಾ ಪಡಿತರ ಚೀಟಿ(ಬಿಪಿಎಲ್)ಗಳನ್ನು ಹಿಂದುರಿಗಿಸುವುದಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಪೋಸ್ಟರ್ ಹಾಗೂ ಕರಪತ್ರಗಳನ್ನು ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್ ಅವರು ಬುಧವಾರ ಬಿಡುಗಡೆ ಮಾಡಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈ ಜಾಗೃತಿ ಸಂದೇಶದ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಎಡಿಸಿ ಸತೀಶಕುಮಾರ್ ಅನರ್ಹರು ತಾವು ಪಡೆದಿರುವ ಬಿಪಿಎಲ್ ಕಾಡರ್್ಗಳನ್ನು ಹಿಂದುರಿಸಬೇಕು ಎಂದು ಎಚ್ಚರಿಸಿದರು.

ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲ ಕಾಯಂ ನೌಕರರು ಅಂದರೇ ಸರಕಾರದ ಅಥವಾ ಸರಕಾರದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರಕಾರಿ ಪ್ರಾಯೋಜಿತ, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಮಂಡಳಿಗಳು ನಿಗಮಗಳು, ಸ್ವಾಯತ್ತ  ಸಂಸ್ಥೆಗಳು ಒಳಗೊಂಡಂತೆ ಆದಾಯ ತೆರಿಗೆ ಸೇವಾ ತೆರಿಗೆ ವ್ಯಾಟ್ ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಕುಟುಂಬದ ವಾಷರ್ಿಕ ಆದಾಯ 1.20ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ವಾಹನಗಳನ್ನು ಹೊಂದಿದ ಕುಟುಂಬ ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲ ಕುಟುಂಬಗಳು ಬಿಪಿಎಲ್ ಕಾಡರ್್ಗಳು ಪಡೆಯಲು ಅರ್ಹರಿರುವುದಿಲ್ಲ ಎಂದು ಅವರು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಆಥರ್ಿಕವಾಗಿ ಸಬಲ ಮತ್ತು ಇತರೆ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್  ಹಿಂದಿರಿಗಿಸುವಂತೆ ಅನೇಕ ಬಾರಿ ಮನವಿ ಮಾಡಿದಾಗಿಯೂ ಕೆಲವರು ಮಾತ್ರ ಸ್ಪಂದಿಸಿ ಹಿಂದುರಿಗಿಸಿದ್ದಾರೆ ಎಂದರು.

ಸಾವಿರಾರು ಜನ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್  ಈಗಾಗಲೇ ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಬಿಪಿಎಲ್ ಕಾಡರ್್ ಪಡೆದವರು ಕೂಡಲೇ ಹಿಂದುರಿಗಿಸಿ; ಇಲ್ಲದಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ಆಹಾಗ,ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿದರ್ೇಶಕ ರಾಮೇಶ್ವರಪ್ಪ  ಮಾತನಾಡಿದರು.

ಈ ಸಂದರ್ಭದಲ್ಲಿ ಆಹಾಗ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕಾರಿಗಳಾದ ಸುನೀತಾ, ಹಲೀಮಾ, ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ತಹಸೀಲ್ದಾರ್ ವಿಶ್ವಜೀತ್ ಮೆಹತಾ ಸೇರಿದಂತೆ ಅನೇಕರು ಇದ್ದರು.