ಬಳ್ಳಾರಿ: ಪೋಷಕರು ಮಕ್ಕಳಿಗೆ ಡಿಪಿಟಿ, ಟಿಡಿ ಲಸಿಕೆಯನ್ನು ತಪ್ಪದೆ ಹಾಕಿಸಿ

ಬಳ್ಳಾರಿ 21: ನಗರದ ಬಳ್ಳಾರಪ್ಪ ಕಾಲೋನಿಯಲ್ಲಿನ ಜ್ಞಾನಭಾರತಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಲಸಿಕಾ ಅಭಿಯಾನ ನಿಮಿತ್ತ ಡಿಪಿಟಿ, ಟಿಡಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ನಗರದ ಗುಗ್ಗರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಾಶಿಪ್ರಸಾದ್, ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮಕ್ಕಳಲ್ಲಿ ಗಂಟಲುಮಾರಿ, ನಾಯಿಕೆಮ್ಮು, ಧನುವಾರ್ಯಾ  ಕಾಯಿಲೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಕಳೆದ ಜನವರಿ ತಿಂಗಳಿಂದ ಇಲ್ಲಿವರೆಗೆ ರಾಜ್ಯಾದ್ಯಂತ 619 ಪ್ರಕರಣಗಳು ಕಾಣಿಸಿಕೊಂಡಿವೆ. ಬಳ್ಳಾರಿ ಜಿಲ್ಲೆಯಲ್ಲೂ ವಿದ್ಯಾರ್ಥಿಗಳು ಈ ಕಾಯಿಲೆಗೆ ತುತ್ತಾಗಿದ್ದಾರೆ. ಕಲ್ಬುಗರ್ಿಯಲ್ಲಿ 44 ವೈದ್ಯಕೀಯ ವಿದ್ಯಾಥರ್ಿಗಳಲ್ಲೂ ಕಾಣಿಸಿಕೊಂಡಿದೆ. ಹಾಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂಜಾಗ್ರತಾ ಕ್ರಮವಾಗಿ 1ನೇ ತರಗತಿಯಿಂದ 10ನೇ ತರಗತಿವರೆಗೆ ಮಕ್ಕಳಿಗೆ ಡಿಪಿಟಿ, ಟಿಡಿ ಲಸಿಕೆಯನ್ನು ಪ್ರತಿ ಶಾಲೆಯಲ್ಲೂ ಹಾಕಲಾಗುತ್ತಿದೆ ಎಂದು ತಿಳಿಸಿದರು. 

1 ರಿಂದ 5 ವರ್ಷದೊಳಗಿನ ಮಕ್ಕಳಲ್ಲಿ ಗಂಟಲುಮಾರಿ, ನಾಯಿಕೆಮ್ಮು, ಧನುವಾಯರ್ು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಈ ಮಕ್ಕಳಿಗೆ ಡಿಪಿಟಿ ಲಸಿಕೆಯನ್ನು ಹಾಕಲಾಗುತ್ತದೆ. 5 ವರ್ಷದ ನಂತರ ಸಾಮಾನ್ಯವಾಗಿ ಮಕ್ಕಳಲ್ಲಿ ನಾಯಿಕೆಮ್ಮು ಕಾಣಿಸಿಕೊಳ್ಳುವುದಿಲ್ಲ. ಇವರಿಗೆ ಡಿಟಿ ಲಸಿಕೆಯನ್ನು ಮಾತ್ರ ಹಾಕಲಾಗುತ್ತದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಡಿಪಿಟಿ, ಟಿಡಿ ಲಸಿಕೆಯನ್ನು ತಪ್ಪದೇ ಹಾಕಿಸುವ ಮೂಲಕ ತಮ್ಮ ಮಕ್ಕಳನ್ನು ಡಿಫ್ತೀರಿಯಾ ಕಾಯಿಲೆಗಳಿಂದ ದೂರ ಮಾಡಬಹುದು ಎಂದು ಸಲಹೆ ನೀಡಿದರು. 

ಜ್ಞಾನಭಾರತಿ ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗಿನ ಒಟ್ಟು 154 ವಿದ್ಯಾಥರ್ಿಗಳಿಗೆ ಲಸಿಕೆಯನ್ನು ಹಾಕಲಾಯಿತು. ಗುಗ್ಗರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಶುಶ್ರೂಷಕಿ ಯಶೋಧಾ, ಕಿರಿಯ ಶುಶ್ರೂಷಕರಾದ ಜಯಮಣಿ, ದಿವ್ಯಾ ಅವರು ಮಕ್ಕಳಿಗೆ ಲಸಿಕೆಯನ್ನು ಹಾಕಿದರು. ಕೇಂದ್ರದ ಆಶಾ ಕಾರ್ಯಕರ್ತೆಯರಾದ ಶ್ರೀದೇವಿ, ಕಲ್ಯಾಣಿ, ಸಲೀಮಾಬೇಗಂ ಸಹಕರಿಸಿದರು. 

ಈ ವೇಳೆ ಶಾಲೆಯ ಮುಖ್ಯಶಿಕ್ಷಕ ಬಿ.ವೆಂಕಟೇಶಲು, ಶಿಕ್ಷಕಿಯರಾದ ವೈ.ಶೋಭಾ, ಅಂಜಲಿ, ಅನಿತಾ, ಪಕ್ಕೀರಮ್ಮ, ತೇಜಾ ಸೇರಿದಂತೆ ಆಡಳಿತ ಮಂಡಳಿಯ ಎಸ್.ರಾಘವೇಂದ್ರ ಇದ್ದರು.