ಲೋಕದರ್ಶನ ವರದಿ
ಬಳ್ಳಾರಿ 03: ಮಹಾನಗರ ಪಾಲಿಕೆಯಿಂದ ಪ್ಲಾಸ್ಟಿಕ್ ದಾಳಿ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಕೆ ಆಯುಕ್ತೆ ತುಷಾರಮಣಿ ಅವರ ನೇತೃತ್ವದಲ್ಲಿ ನಗರದ ವಿವಿಧೆಡೆ ಗುರುವಾರ ದಾಳಿ ನಡೆಸಿದ ಪಾಲಿಕೆಯ ಕಂದಾಯ ಮತ್ತು ಆರೋಗ್ಯ ಇಲಾಖೆಗಳ ತಂಡ ಅಪಾರ ಪ್ರಮಾಣದಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, 18500 ರೂ. ದಂಡ ವಿಧಿಸಿದೆ.
ನಗರದ ಇನ್ಫೆಂಟ್ರಿ ರಸ್ತೆ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ದಾಳಿ ನಡೆಸಿದ ಆಯುಕ್ತೆ ತುಷಾರಮಣಿ ನೇತೃತ್ವದ ತಂಡ ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ ಮತ್ತು ದಂಡ ವಿಧಿಸಿ ಖಡಕ್ ಸೂಚನೆ ಕೂಡ ನೀಡಲಾಗಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಆವರಣವನ್ನು ಪ್ಲಾಸ್ಟಿಕ್ ಮುಕ್ತ ವಲಯವೆಂದು ಘೋಷಿಸಲಾಗಿದ್ದು, ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಮತ್ತು ಪ್ಲಾಸ್ಟಿಕ್ ವಸ್ತುಗಳು ಈ ಆವರಣದಲ್ಲಿ ಬಳಸುತ್ತಿರುವುದು ಕಂಡುಬಂದಲ್ಲಿ 500 ರೂ.ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ತುಷಾರಮಣಿ ಎಚ್ಚರಿಕೆ ನೀಡಿದ್ದಾರೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ಗಳನ್ನು ಬಳಸುವಂತೆ ಅವರು ಸಲಹೆ ನೀಡಿದ್ದಾರೆ.
ಇದುವರೆಗೆ ಟ್ರೇಡ್ಲೈಸನ್ಸ್ ಪಡೆಯದಿದ್ದವರು ಕೂಡಲೇ ಲೈಸೆನ್ಸ್ ಪಡೆದುಕೊಳ್ಳಬೇಕು; ಇಲ್ಲದಿದ್ದಲ್ಲಿ ದುಪ್ಪಟ್ಟು ಪ್ರಮಾಣದ ದಂಡ ವಿಧಿಸಲಾಗುವುದು ಮತ್ತು ಲೈಸನ್ಸ್ ಪ್ರಮಾಣಪತ್ರವನ್ನು ಅಂಗಡಿಯ ಎದುರುಗಡೆ ನಾಮಫಲಕದಲ್ಲಿ ಲಗತ್ತಿಸಬೇಕ