ಬಳ್ಳಾರಿ : ಕೋಳಿ ಸಾಕಾಣಿಕೆ ತರಬೇತಿ ಸಮಾರಂಭ

ಲೋಕದರ್ಶನ ವರದಿ

ಬಳ್ಳಾರಿ 05: ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 10 ದಿನಗಳ ಕಾಲ ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ ಸಮಾರಂಭವನ್ನು ಮಂಗಳವಾರ ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. 

ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದ, ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕ ಎನ್.ಕೃಷ್ಣಪ್ಪ ಅವರು ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಸ್ವ-ಉದ್ಯೋಗವನ್ನಾಗಿ ಮಾಡಿಕೊಂಡು ತರಬೇತಿಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು. 

ಸಿಂಡ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿದರ್ೇಶಕರಾದ ಶರಣ ಬಸವ ರೆಡ್ಡಿ.ಡಿ ಅವರು ಮಾತನಾಡಿ, ತರಬೇತಿ ಜೊತೆಗೆ ಫಲಾನುಭವಿಗಳಿಗೆ ವ್ಯಕ್ತಿತ್ವ ವಿಕಸನ, ಆತ್ಮ ವಿಶ್ವಾಸ, ಸಂವಹನ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದರು. ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ 23 ಜನ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸಕ ಮಹಮ್ಮದ್ ನಿಸಾರ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್, ಕಿರಣ ಕುಮಾರ ಇದ್ದರು.