ಬಳ್ಳಾರಿ: ವಿಎಸ್ಆರ್ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನ ಆಚರಣೆ ಕಾನೂನಿನ ಅರಿವು ವಿದ್ಯಾಥರ್ಿಗಳಿಗೆ ಅವಶ್ಯ

ಲೋಕದರ್ಶನ ವರದಿ

ಬಳ್ಳಾರಿ 26: ವಿದ್ಯಾರ್ಥಿಗಳೇ ದೇಶದ ಆಧಾರಸ್ತಂಭ, ಭವಿಷ್ಯದ ಪ್ರಜೆಗಳಾಗಿರುವ ವಿದ್ಯಾರ್ಥಿಗಳು ಕಾನೂನಿನ ಅರಿವನ್ನು ಅವಶ್ಯವಾಗಿ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪಿ.ಟಿ.ಕಟ್ಟಿಮನಿ ಹೇಳಿದರು.

ನಗರದ ವಿ.ಎಸ್.ಆರ್. ಕಾನೂನು ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರು ಸಂವಿಧಾನದಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳಬೇಕು.ಶೋಷಿತ ವರ್ಗದವರ ಏಳ್ಗೆಗಾಗಿ ಸಂವಿಧಾನ ಜಾರಿಗೊಳಿಸಲಾಯಿತು.ನ.26 1949 ರಂದು ದೇಶದಲ್ಲಿ ಸಂವಿಧಾನ ಜಾರಿಗೊಳಿಸಲಾಯಿತು. ಸಂವಿಧಾನ ಎನ್ನುವುದು ಸರ್ವ ಜನಾಂಗದ ಪ್ರತೀಕ. ಪ್ರಜಾಪ್ರಭುತ್ವ ಉಳಿವಿಗಾಗಿ ಸಂವಿಧಾನ ರಚಿಸಲಾಯಿತು ಎಂದರು.

ವಿವಿಧ ದೇಶಗಳಿಂದ ಸಂವಿಧಾನ ಅಧ್ಯಯನ ಮಾಡಿ ಭಾರತ ಸಂವಿಧಾನಕ್ಕೆ ಅಳವಡಿಸಿಕೊಳ್ಳಲಾಗಿದೆ ಎಂದರು.

ವಿ.ಎಸ್.ಆರ್. ಕಾನೂನು ಕಾಲೇಜಿನ ಪ್ರಾಚಾರ್ಯಾ  ಡಾ.ರಜನಿ ಮಾತನಾಡಿ, ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರವನ್ನು ಸ್ಮರಿಸುತ್ತಾ 1949ರಲ್ಲಿ ರಚನೆಯಾದ ಸಂವಿಧಾನವನ್ನು ಕಾಲಕಾಲಕ್ಕೆ ಅನುಗುಣವಾಗಿ ತಿದ್ದುಪಡಿ ಮಾಡಲಾಗಿದೆ ಎಂದರು.

ಬಳ್ಳಾರಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಎಚ್.ಎಮ್ .ಅಂಕಲಯ್ಯ ಮಾತನಾಡಿ ಭಾರತದಲ್ಲಿ ಸಂವಿಧಾನ ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ಎಂಬ ಖ್ಯಾತಿ ಗಳಿಸಿದೆ. ಸಂವಿಧಾನದ ಪ್ರಕಾರ ವಿದ್ಯಾಥರ್ಿಗಳು  ಹಕ್ಕುಗಳನ್ನು ಪಡೆದುಕೊಂಡು ಜೀವನದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾ. ಅರ್ಜುನ ಮಲ್ಲೂರ ಮಾತನಾಡಿದರು.

 ಈ ಸಂದರ್ಭದಲ್ಲಿ ವಕೀಲರು, ಪಾನೆಲ್ ವಕೀಲರು, ಅರೇಕಾಲಿಕ ಕಾನೂನು ಸ್ವಯಂ ಸೇವಕರು ಹಾಗೂ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಗಳು ಸೇರಿದಂತೆ 300ಕ್ಕೂ ಹೆಚ್ಚು ಜನರು ಇದ್ದರು.