ಲೋಕದರ್ಶನ ವರದಿ
ಬಳ್ಳಾರಿ 21: ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಗ್ರಾಮದ ನಿವಾಸಿ ಜಂಬಯ್ಯ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಲ್ತಾನಪುರ ಗ್ರಾಮದ ಸುತ್ತಮುತ್ತಲೂ ಗಣಿ ಕಾಖರ್ಾನೆಗಳು ತಲೆ ಎತ್ತಿವೆ. ಈ ಕಾರ್ಖಾನೆಗಳಿಂದ ಪರಿಸರ ಮಾಲಿನ್ಯ, ಸಂಚಾರ ದಟ್ಟಣೆಯಿಂದಾಗಿ ಸ್ಥಳೀಯ ನಿವಾಸಿಗಳ ಆರೊಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೇ, ನಿವಾಸಿಗಳು ಕೆಲವೊಂದು ಗಂಭೀರ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ. ಹಾಗಾಗಿ ಕೈಗಾರಿಕೆಗಳಿಂದ ಗ್ರಾಮದ ಜನರನ್ನು ಮುಕ್ತಗೊಳಿಸುವ ಸಲುವಾಗಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದವರು ಆಗ್ರಹಿಸಿದರು.
ಕೈಗಾರಿಕೆಗಳಿಂದ ಸುಲ್ತಾನಪುರದ ಜನರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಈಗಾಗಲೇ 2-3 ವರ್ಷಗಳಿಂದ ಜಿಲ್ಲಾಧಿಕಾರಿ ಸೇರಿ ಸಂಬಂಧಪಟ್ಟ ಜಿಲ್ಲ, ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಪರಿಸರ ಮಾಲಿನ್ಯ, ವಾಹನ ದಟ್ಟಣೆ ನಿಯಂತ್ರಿಸುವಂತೆ ಹಲವು ಮನವಿಯನ್ನೂ ಸಲ್ಲಿಸಲಾಗಿದೆ. ಆದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಜಂಬಯ್ಯ, ಕಂದಾಯ ಗ್ರಾಮದ ಸುಲ್ತಾನಪುರದಲ್ಲಿ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇದ್ದು, 750ಕ್ಕೂ ಹೆಚ್ಚು ಜನಸಂಖ್ಯೆಯಿದೆ. 230 ಮನೆಗಳನ್ನು ನಿಮರ್ಿಸಿಕೊಂಡು ವಾಸ ಮಾಡುತ್ತಿದ್ದಾರೆ. ಆದರೆ, ಇದ್ಯಾವುದನ್ನು ಪರಿಶೀಲಿಸದ ಸಂಬಂಧಪಟ್ಟ ಅಧಿಕಾರಿಗಳು ಏಕಾಏಕಿ ಕಾಖರ್ಾನೆಗಳಿಗೆ ಪರವಾನಿಗೆ ನೀಡಿರುವ ರಾಜ್ಯ ಸಕರ್ಾರ, ಗ್ರಾಮದ ಜನರ ಜೀವನವನ್ನು ನರಕಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಶೇಷ ಕೈಗಾರಿಕಾ ವಲಯವಾಗಿ ಗುರುತಿಸಿಕೊಂಡಿರುವ ಸುಲ್ತಾನಪುರ ಗ್ರಾಮವನ್ನು ಉತ್ತಮ ಆರೋಗ್ಯ ಹಾಗೂ ಭವಿಷ್ಯದ ಹಿತ ದೃಷ್ಟಿಯಿಂದ ಬೇಡಿಕೆಗಳಿಗೆ ಅನುಗುಣವಾಗಿ ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಕುಬೇರ, ಇ.ಎರ್ರಿಸ್ವಾಮಿ, ಎಸ್.ಹುಲುಗಪ್ಪ ಸೇರಿ ಹಲವರು ಇದ್ದರು.