ಲೋಕದರ್ಶನ ವರದಿ
ಬಳ್ಳಾರಿ 20: ಪಿಡಿ.ಹಳ್ಳಿ ಪೊಲೀಸ್ ಠಾಣೆ ಮತ್ತು ಸನ್ಮಾರ್ಗ ಗೆಳೆಯರ ಬಳಗ ಇವರ ಸಂಯುಕ್ತಾಶ್ರಯದಲ್ಲಿ ರೂಪನಗುಡಿ ಮತ್ತು ಚೇಳ್ಳಗುರ್ಕ ಗ್ರಾಮಗಳಲ್ಲಿ ಅಪರಾಧ ತಡೆ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕುರಿತು ಮಾತನಾಡಿದ ಬಳ್ಳಾರಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್, ಎ.ಟಿ.ಎಂ. ಕಾರ್ಡ್ ವಂಚನೆ, ಓ.ಎಲ್.ಎಕ್ಸ್, ಕ್ವಿಕರ್ ಆನ್ಲೈನ್ ಮೂಲಕ ವಂಚನೆ, ಎಸ್ಎಂಎಸ್ ಮೂಲಕ ವಂಚನೆ ಮಾಡುವವರ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಯಾವುದೇ ರೀತಿಯಿಂದ ಅವರ ಜೊತೆ ಒಡನಾಟ ಇಟ್ಟುಕೊಳ್ಳದೇ, ಅನುಮಾನ ಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ನಮ್ಮೊಂದಿಗೆ ಸಹಕರಿಸಲು ಮನವಿ ಮಾಡಿದರು.
ಪಿ.ಡಿ.ಹಳ್ಳಿ ಪಿ.ಎಸ್.ಐ. ಶರತ್ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ದರೋಡೆ, ಡಕಾಯಿತಿ, ಕಳ್ಳತನಗಳಕ್ಕಿಂತ ಸೈಬರ್ ಕ್ರೈಮ್ ಹೆಚ್ಚಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ಹಾಗಾಗಿ ವಿದ್ಯಾರ್ಥಿಗಳು ಫೇಸ್ಬುಕ್, ವಾಟ್ಸಾಫ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು, ಕಾನೂನಿಗೆ ತೊಂದರೆಯಾಗುವ ರೀತಿಯಲ್ಲಿ ತಮ್ಮ ವೈಯಕ್ತಿಕ ಭಾವಚಿತ್ರಗಳನ್ನು ಶೇರ್ ಮಾಡಬಾರದೆಂದು ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಎಸ್.ಪಿ. ಕಛೇರಿಯಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಖುದ್ದಾಯಿ ಭೇಟಿ ನೀಡಿಯಾಗಲೀ ಅಥವಾ 9480803014 ನಂಬರ್ ಕರೆ ಮಾಡಿ ಮಾಹಿತಿಯನ್ನು ಪಡೆಯಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಾಸ್ಯ ಕಲಾವಿದ ಎ.ಎರ್ರಿಸ್ವಾಮಿ ಅಪರಾಧ ತಡೆ ಕುರಿತು ತಮ್ಮ ಹಾಸ್ಯ ಚಟಾಕಿಗಳ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾದರು.
ಕಾರ್ಯಕ್ರಮದಲ್ಲಿ ಬಸರಕೋಡು ಶಾಲೆಯ ಮುಖ್ಯ ಗುರುಗಳಾದ ಮೆಹತಾಬ್, ಸನ್ಮಾರ್ಗ ಗೆಳೆಯರ ಬಳಗದ ಕಾರ್ಯದರ್ಶಿ ಕಪ್ಪಗಲ್ಲು ಚಂದ್ರಶೇಖರ ಆಚಾರ್, ರೂಪನಗುಡಿ ಶಾಲೆಯ ಮುಖ್ಯ ಗುರುಗಳಾದ ಶಿವಣ್ಣ, ಕಾಲೇಜಿನ ಪ್ರಾಚಾರ್ಯರಾದ ನಾಗಭೂಷಣ, ಚೇಳ್ಳಗುಕರ್ಿ ಶಾಲೆಯ ಮುಖ್ಯ ಗುರುಗಳಾದ ಶೋಭಾ, ಮೊರಾರ್ಜು ದೇಸಾಯಿ ಶಾಲೆಯ ಮುಖ್ಯ ಗುರುಗಳಾದ ಬಸವರಾಜ್, ಕೆ.ಎಂ.ಬಸವರಾಜ್ ಇನ್ನಿತರರು ಹಾಜರಿದ್ದರು.