ಭಾರತ ವಿದ್ಯಾರ್ಥಿ ಫೆಡರೇಶನ್ - ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸಲು ವಿದ್ಯಾರ್ಥಿಗಳುಪ್ರತಿಭಟನೆ

Bharat Vidyatri Federation - Students protest to meet academic demands

ಭಾರತ ವಿದ್ಯಾರ್ಥಿ ಫೆಡರೇಶನ್  - ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸಲು ವಿದ್ಯಾರ್ಥಿಗಳುಪ್ರತಿಭಟನೆ 

ಹಾವೇರಿ 01: ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನ 30ಅ ಹಣವನ್ನು ಮೀಸಲಿಡಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಮಾನ್ಯ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ. ಎಲ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. 

   ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಫೆಬ್ರವರಿ-07 ರಂದು ಮಂಡನೆಯಾಗಲಿರುವ  ರಾಜ್ಯ ಬಜೆಟ್ ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣತಜ್ಞ ಕೊಠಾರಿ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕನಿಷ್ಠ 30ಅ ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮುಂದುವರಿಯುತ್ತಿದ್ದರು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ಬಜೆಟ್ ನಲ್ಲಿ ಹಣ ಕಡಿತ ಮಾಡಿ  ಸರಾಸರಿ ಕೇವಲ 11ಅ ಹಣ ನೀಡುತ್ತಿರುವುದು ಖಂಡನೀಯ. ಇಡೀ ದೇಶದಲ್ಲಿ ಉತ್ತಮ ಗುಣಮಟ್ಟದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಕೇರಳ ರಾಜ್ಯ 27ಅ ಹಣ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲಾ ಕಾಲೇಜು ಹಾಸ್ಟೆಲ್,ವಿಶ್ವ ವಿದ್ಯಾಲಗಳ ಸಮಗ್ರ ಅಭಿವೃದ್ಧಿಗಾಗಿ ಕನಿಷ್ಠ 30ಅ ಹಣವನ್ನು ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು. ಆ ಮೂಲಕ ಗ್ಯಾರಂಟಿ ಪಟ್ಟಿಗೆ ಶಿಕ್ಷಣ ಸೇರಿಸಬೇಕು ಎಂದರು. 

 ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಗೌತಮ್ ಸಾವಕ್ಕನವರ,ಎಸ್‌ಎಫ್‌ಐ ಜಿಲ್ಲಾ ಮುಖಂಡ ಕೃಷ್ಣ ನಾಯಕ ಮಾತನಾಡಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು : ಕೇರಳ, ತಮಿಳುನಾಡು ಮಾದರಿಯಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಕಳೆದ ಹಲವು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳು ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದರು ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ನೀಡುವ ಬದಲು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡಿರೋದು ಖಂಡನೀಯ. ಈ ಕೂಡಲೇ ರಾಜ್ಯ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ಆಗ್ರಹಿಸಿದರು. 

        ಈ ಸಂದರ್ಭದಲ್ಲಿ ಎಸ್‌ಎಫ್‌ಐ ಮುಖಂಡರಾದ ಸುರೇಶ್ ಹಂಡಿ, ಅಶ್ರಫ ನದಾಫ, ಚಂದ್ರಶೇಖರ ಗಿರೇಪ್ಪಗೌಡ್ರ, ಚನ್ನರಾಜಯ್ಯ ಹಚ್‌.ಎಂ, ಸಂದೀಪ್ ಅಣ್ಣಿಗೇರಿ, ಸಂಜಯ ಎಚ್, ಚೇತನ ಎಮ್, ಸುನೀಲ್ ಪತ್ತಾರ, ಅಭಿಷೇಕ ಡಿ, ಉಮೇಶ್ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.