ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣವರ ಜಯಂತಿ

Birth anniversary of freedom fighter Sindhur Lakshmanavar

ಹುಬ್ಬಳ್ಳಿ 22: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಸಿಂಧೂರ ಲಕ್ಷ್ಮಣವರ ಜಯಂತಿ ನಿಮಿತ್ ಶೌರ್ಯ ಮತ್ತು ಸಾಹಸಕ್ಕೆ ಹೆಸರಾದ ಸಿಂಧೂರ ಲಕ್ಷ್ಮಣ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡುವ ಮೂಲಕ ಗೌರವ ಅರ್ಪಣೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.

ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್‌.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಯೋಗ ಶಿಕ್ಷಕಿ, ಹುಬ್ಬಳ್ಳಿಯ  ಪತಂಜಲಿ ಯೋಗ ಸಮಿತಿಯ ಮಹಿಳಾ ಪ್ರಭಾರಿ ಪೂರ್ಣಿಮಾ ಬಸವರಾಜ ಹರವಿ,  ರವಿ ಬೆಂತೂರ, ಡಾ. ಸಿ.ತ್ಯಾಗರಾಜ, ಟಿ.ಬಿ.ಜೋಗಿನ, ಬಸವರಾಜ ಕದಡಿ, ಡಾ. ಬಸವಕುಮಾರ ತಲವಾಯಿ, ನಂದೀಶ ಬಸವರಾಜ ಹರವಿ, ಮುಂತಾದವರು ಇದ್ದರು.  ಅತಿಥಿಗಳು  ಸಿಂಧೂರ ಲಕ್ಷ್ಮಣ ಅವರ ಸಾಹಸ, ದೈರ್ಯ, ದಿಟ್ಟತನ, ಮುಂತಾದ ಗುಣಗಳನ್ನು ಮುಕ್ತ ಕಂಠದಿಂದ ಸ್ಮರಿಸಿದರು.  

 ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.95 ಅಂಕಗಳನ್ನು ಪಡೆದ ನಂದೀಶ ಬಸವರಾಜ ಹರವಿ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು  ಶಾಲು, ಗ್ರಂಥ ನೀಡಿ, ಮಾಲಾರೆ​‍್ಣ ಮಾಡಿ ಅತ್ಯಂತ ಸಂತೋಷ, ಪ್ರೀತಿಯಿಂದ ಹೃದಯಸ್ಪರ್ಶಿಯಾಗಿ ಗೌರವಿಸಿದರು. ಅವರ ಸಾಧನೆಗೆ ಹೆಮ್ಮೆ, ಅಭಿಮಾನದ ಅಭಿನಂದನೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಅವರು ಇನ್ನೂ ಹೆಚ್ಚು ಸಾಧನೆ ಮಾಡಲಿ ಎಂದು ಶುಭ ಕೋರಿದರು.