ಹಾವೇರಿ: ಮೇ 29: ಲಾಕ್ಡೌನ್ ಅವಧಿ ಇದೇ ಮೇ 31 ರಂದು ಕೊನೆಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಬಸ್ ಸಂಚಾರ, ಪ್ರಯಾಣಿಕರ ಸಂಖ್ಯೆ ಕುರಿತಂತೆ ಕೇಂದ್ರ ಸಕರ್ಾರದ ನೂತನ ಮಾರ್ಗಸೂಚಿ ಪ್ರಕಟವಾದ ನಂತರ ಮುಖ್ಯಮಂತ್ರಿಗಳೊಂದಿಗೆ ಚಚರ್ಿಸಿ ನಿಧರ್ಾರ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಖಾತೆ ಸಚಿವರಾದ ಲಕ್ಷ್ಮಣ ಸವದಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಲಾಕ್ಡೌನ್ ಅವಧಿಯಲ್ಲಿ ಶೇ.60ರಷ್ಟು ಬಸ್ ಓಡಾಟವನ್ನು ನಿಲ್ಲಿಸಲಾಗಿತ್ತು. ಈಗ ಪುನಃ ಸಂಚಾರ ಆರಂಭಿಸಲಾಗಿದೆ. ಶೇ.30ಕ್ಕಿಂತ ಕಡಿಮೆ ಪ್ರಯಾಣಿಕರನ್ನು ಕರೆದೊಯ್ಯುವ ನಿಯಮದಿಂದ ಸಾರಿಗೆ ಇಲಾಖೆಗೆ ದೊಡ್ಡ ಪ್ರಮಾಣದ ನಷ್ಟವಾಗಿದೆ. ನಾಲ್ಕು ಸಾರಿಗೆ ವಿಭಾಗಗಳಿಂದ 1800 ಕೋಟಿ ರೂ. ನಷ್ಟ ಉಂಟಾಗಿದೆ. ವಿದ್ಯಾಥರ್ಿಗಳ ಬಸ್ ಪಾಸ್ ಪ್ರೋತ್ಸಾಹಧನದ ಮೊತ್ತ ಸಕರ್ಾರದಿಂದ ರಾಜ್ಯದ ನಾಲ್ಕು ನಿಗಮಕ್ಕೆ 2960 ಕೋಟಿ ರೂ. ಬಾಕಿ ಬರಬೇಕಾಗಿದೆ. ಈ ಹಣವನ್ನು ಸಕರ್ಾರದಿಂದ ಹಂತ ಹಂತವಾಗಿ ಪಡೆದು ಇಲಾಖೆಯ ನಿರ್ವಹಣೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಹತ್ತಿರವಾದ ಸಾರಿಗೆ ಇಲಾಖೆ ನಷ್ಟ ಅನುಭವಿಸಿದರೂ ಸಾರ್ವಜನಿಕ ಸೇವೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ವಾಹನವನ್ನು ಓಡಿಸಲಾಗಿದೆ. ಈ ಸಂದರ್ಭದಲ್ಲಿ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಹೊಸ ಯೋಜನೆಯೊಂದಿಗೆ ಬಸ್ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವೆಚ್ಚದಲ್ಲಿ ಕಡಿಮೆ, ಆದಾಯ ಸೋರಿಕೆ ಕಡಿಮೆ ಮಾಡುವುದು, ನಿರ್ವಹಣೆಯ ವೆಚ್ಚ ಕಡಿತ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ. ಈ ಕಾರ್ಯದಲ್ಲಿ ಸಾರಿಗೆ ಇಲಾಖೆಯ ಎಲ್ಲ ಅಧಿಕಾರಿಗಳು ಸಿಬ್ಬಂದಿಗಳು ಸಹಕರಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.
ಹಾವೇರಿಗೆ ಆದ್ಯತೆ: ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಚಿವರ ಬೇಡಿಕೆಯಂತೆ ಹೊಸ ಬಸ್ಗಳನ್ನು ನೀಡಲಾಗುವುದು. ಇಲ್ಲಿನ ಶಾಸಕರು ಹಾಗೂ ಸಂಸದರ ಬೇಡಿಕೆಯಂತೆ ಸಾರಿಗೆ ಡಿಪೋಗಳಿಗೆ ಮೂಲ ಸೌಕರ್ಯಗಳ ಹೆಚ್ಚಳ, ಹೊಸ ಬಸ್ ನಿಲ್ದಾಣ ನಿಮರ್ಾಣ, ನವೀಕರಣ ಹಾಗೂ ರಾಣೇಬೆನ್ನೂರ ಬಸ್ ನಿಲ್ದಾಣವನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸುವ ಕಾರ್ಯ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
ಹಾವೇರಿ ಸಾರಿಗೆ ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆ ಇಲ್ಲ. 2312 ಜನ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 544 ಬಸ್ಗಳಿವೆ. ಮುಂದಿನ ದಿನಗಳಲ್ಲಿ ಸಾರಿಗೆ ನಷ್ಟ ತಗ್ಗಿಸಲು ಅಧಿಕಾರಿಗಳಿಗೆ ತ್ರೈಮಾಸಿಕ ಯೋಜನೆ ರೂಪಿಸಿ ಅನುಷ್ಠಾನಕ್ಕೆ ಸೂಚಿಸಿದೆ ಎಂದು ತಿಳಿಸಿದರು.
ಬಸ್ ಸಂಚಾರ: ವಿದ್ಯಾಥರ್ಿಗಳಿಗೆ, ಶಾಲಾ-ಕಾಲೇಜು ಅವಧಿಯಲ್ಲಿ ಬಸ್ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ನಿಗಧಿತ ಅವಧಿಯಲ್ಲಿ ಬಸ್ಗಳ ಓಡಿಸುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡಿಪೋವಾರು ಸಭೆ ನಡೆಸಿ ಸ್ಥಳೀಯ ಜನತೆಗೆ ಅನುಕೂಲರ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.
ಲೈಸನ್ಸ್ ರದ್ದು: ನಿಗಧಿತ ಸಂಖ್ಯೆಗಿಂತ ಹೆಚ್ಚು ಪ್ರಯಾಣಿಕರನ್ನು ಕರೆದೊಯ್ಯುವುದು ಹಾಗೂ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಓಡಾಡುವ ಖಾಸಗಿ ವಾಹನಗಳಿಗೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ. ಸಾರಿಗೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾಯರ್ಾಚರಣೆ ನಡೆಸಿ ಇಂತಹ ವಾಹನಗಳ ಪರವಾನಿಗೆ ರದ್ದುಪಡಿಸಲು ಸೂಚಿಸಲಾಗಿದೆ ಹಾಗೂ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ 500 ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯುವುದು ಹಾಗೂ ಇಳಿಸುವುದನ್ನು ಮಾಡಿದರೆ ಇವರ ಮೇಲೆ ಕಠಿಣ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಗೃಹ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಸಂಸದರಾದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಅರುಣಕುಮಾರ ಗುತ್ತೂರ, ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿದ್ಧರಾಜ ಕಲಕೋಟಿ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಉಪಸ್ಥಿತರಿದ್ದರು.