ಲೋಕದರ್ಶನ ವರದಿ
ಅರಿವು ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಕರೆ
ವಿಜಯಪುರ, ಏ.25: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ-ನೀಟ್ ಮೂಲಕ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ (ಶೈಕ್ಷಣಿಕ) ಸಾಲ ಪಡೆಯಲು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಸಿಇಟಿ-ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿಇ, ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಷ, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್ ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಹೊಸದಾಗಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ನಿಗಮದ ವೆಬ್ ಸೈಟ್ ಣಣಠಿ://ಞಟಜಛಿಠಟಟಿಜ.ಞಚಿಡಿಟಿಚಿಣಚಿಞಚಿ.ರಠ.ಟಿ ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಪ್ರಿಂಟ್‌ಓಟ್ ತೆಗೆದು, ಇತರೆ ಅವಶ್ಯಕ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ನಂತರ ಅರ್ಹ ವಿದ್ಯಾರ್ಥಿಗಳಿಗೆ ಅವರು ಸೇರಬಯಸುವ ಕಾಲೇಜಿಗೆ ಬೋಧನಾ ಶುಲ್ಕವನ್ನು ನೇರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪಾವತಿಸಲಾಗುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ: 23-05-2025 ಕೊನೆಯ ದಿನವಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ ದೂ:08352-278344 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಂ.ಎ.ಶೇಖ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.