ವಿಜಯಪುರ, ಡಿ.18 ಬಿಜೆಪಿ
ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ಸಂಭವಿಸಿದೆ.ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮೂಡ ಅವರ ಕಾರಿಗೆ ಬೈಕ್
ಸವಾರ ಅಡ್ಡ ಬಂದ ಹಿನ್ನೆಲೆಯಲ್ಲಿ ಏಕಾಏಕಿ ಅವರ ಕಾರು
ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಶಾಸಕರ ಕಾರಿಗೆ
ಹಿಂದೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ
ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.