ಇಂಡಿ 01: ಬಸವೇಶ್ವರ ಜಯಂತಿಯನ್ನು ಇಂಡಿ ತಾಲೂಕಿನ್ಯಾದಂತ ಎಲ್ಲೆಡೆ ಅತಿ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಗೆ ಕಾರಣಾರಾದ ಮಹಾನ್ ವ್ಯಕ್ತಿಗಳಲ್ಲಿ ಜಗಜ್ಯೊತಿ ಬಸವಣ್ಣನವರು ಒಬ್ಬರು. ಎಂದು ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಂದಾ ವಾಲಿಕಾರ ಅವರು ಹೇಳಿದರು.
ಬಸವಣ್ಣನವರು ಮಾದರಸ ಮತ್ತು ಮಾದಲಾಂಬಿಕೆಯ ಮಗನಾಗಿ ಬಾಗೇವಾಡಿಯಲ್ಲಿ ಜನಿಸಿದರು. ಬಸವಣ್ಣನವರು ಮತ್ತು ಶಿವಶರಣರು ಸ್ವೀಕರಿಸಿ, ಆಚರಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಯೋಗ, ಮಹಿಳಾ ಸಬಲೀಕರಣ, ದಲಿತೋದ್ದಾರ ಮತ್ತು ಸಾಮಾಜಿಕ ಕ್ರಾಂತಿಯ ಸಂದೇಶವನ್ನು ಜನತೆಗೆ ನೀಡುವುದು ಬಸವೇಶ್ಡರ ಜಯಂತಿಯ ಮೂಲ ಉದ್ದೇಶವಾಗಿದೆ. 12ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯು ಇಂದು ನಾವು ಎದುರಿಸುತ್ತಿರುವ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ನೀಡುತ್ತಿದ್ದಾರೆ,ಅವರ ತತ್ವ ಸಿದ್ಧಾಂತಗಳನ್ನು ನಮ್ಮ ನೀಜ ಜೀವನದಲ್ಲಿ ಅಳವಡಿಸಿಕೊಂಡು ಮಹತ್ವಪೂರ್ಣ ಜೀವನದಿಂದ ಈ ಸಮಾಜದಲ್ಲಿ ಶಾಂತಿ ನೆಮ್ಮದಿಯಿಂದ ಜೀವನ ಮಾಡಲು ಬಸವನವರ ತತ್ವ ಸಿದ್ಧಾಂತಗಳನ್ನು ಈ ಸಮಾಜಕ್ಕೆ ಸಂದೇಶ ನೀಡಬೇಕಾಗಿದೆ ಎಂದು ಹೇಳಿದರು.
ಈ ಎನ್ ಎಂ ನಾಮದಾರ, ಮಲಿಕಸಾಬ ವಾಲಿಕಾರ, ಮಾದೇವ ನೇಂದ್ಯಾಳ, ಸಿದ್ದು ಮಿರ್ಜಿ, ಮಳಸಿದ್ದಪ್ಪ ಪೂಜಾರಿ ಹಾಗೂ ತಡವಲಗಾ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.