ಹಾವೇರಿ, ಅ 3: ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿ.ಎಚ್.ಕಾಲೇಜಿನಲ್ಲಿ ಬುಧವಾರ ಸಂಜೆ ನಡೆದಿದೆ. ಹಾವೇರಿ ತಾಲೂಕಿನ ದೇವಗೇರಿ ಗ್ರಾಮದ ಜಗದೀಶ್ ಯಲ್ಲಾಪುರ (19) ಎಂಬಾತ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. ಜಿ.ಎಚ್. ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆತ ತನ್ನದೇ ಕಾಲೇಜಿನ ಯುವತಿಯನ್ನು ಪ್ರೇಮಿಸುತ್ತಿದ್ದ. ಆದರೆ, ಆಕೆ ಆತನ ಪ್ರೇಮ ನಿವೇದನೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.