ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ: ಬೊಮ್ಮನಹಳ್ಳಿ

ಬೆಳಗಾವಿ, 21: ಈ ಬಾರಿಯ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು  ನೀತಿಸಂಹಿತೆ ಉಲ್ಲಂಘನೆ ಕುರಿತು ಸಾರ್ವಜಿಕರು ಸಿ-ವಿಜ್ಹಿಲ್ಸಿಟಿಜನ್ ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಆಯೋಗದಿಂದ ಈ ಬಾರಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು.  ಸಾರ್ವಜನಿಕರು ತಮ್ಮ ಸುತ್ತಮುತ್ತ ನೀತಿ ಸಂಹಿತೆ ಉಲ್ಲಂಘನೆಯ ಕಾರ್ಯಗಳು ನಡೆದರೆ ಈ ಆ್ಯಪ್ ಮೂಲಕ ಫೋಟೋ ಅಥವಾ ವಿಡಿಯೋ ರೆಕಾಡರ್್ ಮಾಡಿ ನೇರವಾಗಿ ದೂರು ಸಲ್ಲಿಸುವ ಅವಕಾಶವಿದೆ. ಅಲ್ಲದೇ ಸಾರ್ವಜನಿಕರು ದೂರು ನೀಡಿದ 100 ನಿಮಿಷಗಳಲ್ಲಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಸಿ-ವಿಜ್ಹಿಲ್ಸಿಟಿಜನ್ ಮೊಬೈಲ್ ಆ್ಯಪ್ ಅನ್ನು ಸಾರ್ವಜನಿಕರು ಸರಿಯಾಗಿ ಬಳಸಿಕೊಂಡು ಚುನಾವಣಾ ಅಕ್ರಮಗಳ ಕುರಿತು ದೂರು ಸಲ್ಲಿಸಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ಅವಕಾಶ ಮಾಡಿಕೊಡುವಂತೆ ಕರೆ ನೀಡಿದರು.  

ಒಟ್ಟಿನಲ್ಲಿ ಚುನಾವಣಾ ಆಯೋಗವು ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ ಎಂದು ಹೇಳಬಹುದು.