ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ

ಮಂಗಳೂರು, ಮೇ 6, ಲಾಕ್  ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ  ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ  ಸುತ್ತೋಲೆ ಹೊರಡಿಸಿದೆ. ಸರಕಾರಿ ಆದೇಶದಂತೆ, ಅರ್ಹರಿರುವ ಕೈಗಾರಿಕೆಗಳು, ಐಟಿ/ಐಟಿಇಎಸ್  ಕಂಪನಿಗಳು, ಡಾಟಾ/ಕಾಲ್ ಸೆಂಟರ್‍ಗಳು, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್ ಸರ್ವಿಸಸ್,  ಇಂಕ್ಯೂಬರೇಟರ್‌ಗಳು ಹಾಗೂ ಇನ್ನಿತರ ಕಂಪೆನಿಗಳು ಕಾರ್ಯನಿರ್ವಹಿಸುವ ಬಗ್ಗೆ  ಆನ್‍ಲೈನ್‍ನಲ್ಲಿ ಸ್ವಯಂ ದೃಢೀಕರಣ ಸಲ್ಲಿಸಿದ ನಂತರ ಘಟಕ  ಪ್ರಾರಂಭಿಸಬಹುದಾಗಿದೆ. ಈಗಾಗಲೇ ಪ್ರಾರಂಭಿಸಿರುವ ಘಟಕಗಳು ಸಹ ಈ ಲಿಂಕ್ ಮೂಲಕ ಸ್ವಯಂ  ದೃಢೀಕರಣ ಸಲ್ಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು  ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ  ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17  ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು  ವಿಧಿಸಿ  ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.