ಮುಂಬೈ 25: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ಮಹಾವಿಕಾಸ್ ಅಘಾಡಿ ಹೀನಾಯ ಸೋಲನ್ನು ಅನುಭವಿಸಿದ ಪರಿಣಾಮ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 103 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ನಾನಾ ಪಟೋಲೆ ಕೂಡಾ ಸಾಕೋಲಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 208 ಮತಗಳ ಅಂತರದಿಂದ ಜಯಗಳಿಸಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ 50ಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಮೈತ್ರಿಯ ಮಹಾಯುತಿ ಬರೋಬ್ಬರಿ 232 ಸ್ಥಾನ ಗಳಿಸಿ ಸ್ಪಷ್ಟ ಬಹುಮತ ಪಡೆದಿದೆ.