ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ; ಶೈಲಜಾ ಹಿರೇಮಠ

Congress party has done as it said; Shailaja Hiremath

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ; ಶೈಲಜಾ ಹಿರೇಮಠ

ಕೊಪ್ಪಳ 19:  ಮೇ20: 2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಮಹಾ ಜನತೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ  ಹಾಗೂ ನಾವು  ಕೊಟ್ಟ ಮಾತನ್ನ ಉಳಿಸಿಕೊಂಡಿದ್ದೇವೆ ಎಂದು ಶೈಲಜಾ ಹಿರೇಮಠ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ರವಿವಾರ ಕಾಂಗ್ರೆಸ್ ಪಕ್ಷದ ರಾಜ್ಯ ಮಾಧ್ಯಮ ವಕ್ತಾರರಾದ ಶೈಲಜಾ ಹಿರೇಮಠ ರವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆ ನೂತನ ಜಿಲ್ಲೆಯಾಗಿರುವ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಡಾ. ಪುನೀತರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಸರ್ಕಾರದ ವತಿಯಿಂದ ಸಾಧನ ಸಮಾವೇಶ ಅದ್ದೂರಿಯಾಗಿ ಜರಗಲಿದೆ. ವಿಶೇಷವಾಗಿ ಈ ಸಾಧನ ಸಮಾವೇಶ ಕಾರ್ಯಕ್ರಮದ ಮೂಲಕ  ಕಂದಾಯ ಇಲಾಖೆಯಿಂದ ಹಟ್ಟಿ, ತಾಂಡಾಗಳ ನಿವಾಸಿಗಳಿಗೆ ಆಸ್ತಿ ಹಕ್ಕುಪತ್ರ ವಿತರಣೆ ಸೇರಿದಂತೆ  ಲಕ್ಷಾಂತರ ಫಲಾನುಭವಿಗಳನ್ನು ಸಮಾವೇಶದಲ್ಲಿ ಒಟ್ಟಿಗೆ ಸೇರಿಸಲಾಗುತ್ತಿದೆ. 

1ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ಅಪಾರ ವಿಶ್ವಾಸವಿಟ್ಟು 136 ಸ್ಥಾನ ಕೊಟ್ಟು ಜನರು ಅಧಿಕಾರಕ್ಕೆ ತಂದಿದ್ದಾರೆ. 140 ಸ್ಥಾನಗಳು ಈಗ ಇವೆ. ಬಿಜೆಪಿ ಸರಕಾರ ಕೇಂದ್ರದಲ್ಲಿದ್ರೂ, ಜನ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಜತೆಗೆ ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರನ್ನು ಕರೆಸಲಾಗುತ್ತಿದ್ದು, ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ದಿಲ್ಲಿನಾಯಕರೂ, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಸೇರಿದಂತೆ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕೊಪ್ಪಳ ಜಿಲ್ಲೆಯಿಂದ ಸರಿ ಸುಮಾರು ಹತ್ತು ಸಾವಿರ ಜನ ಕಾರ್ಯಕ್ರಮಕ್ಕೆ ಭಾಗವಹಿಸುವ ನೀರೀಕ್ಷೆ ಇದೆ.  

ಹೀಗಾಗಿ ನಮ್ಮ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮನವಿ ಮಾಡಿದರು. ನಂತರ ನಗರಸಭೆ ಸದಸ್ಯರಾದ ಅಕ್ಬರ್ ಪಾಷಾ ಪಲ್ಟನ್ ಮಾತನಾಡಿ, ಕೊಪ್ಪಳ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್ ರವರು ಅಲ್ಪಸಂಖ್ಯಾತ ಸಮುದಾಯವನ್ನ ಕಡೆಗಣನೆ ಮಾಡಿಲ್ಲ. ನಮ್ಮ ಸಮುದಾಯದ ಮುಖಂಡರು ಹಾಗೂ ನಗರಸಭೆ ಸದಸ್ಯರಾದ ಅಮ್ಜದ್ ಪಟೇಲ್ ರವರನ್ನು ನಗರಸಭೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಯುವಕರು ಸುಳ್ಳು ಸುದ್ದಿಗೆ ಕಿವಿಗೊಡಬಾರದು ಎಂದರು.ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಾಟನ್ ಪಾಷಾ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಇಟ್ಟಂಗಿ, ಕಾಂಗ್ರೆಸ್ ಪಕ್ಷದ ಮಹಿಳಾ ಮುಖಂಡರಾದ ಸವಿತಾ ಗೋರಂಟ್ಲಿ , ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಇತರರು ಉಪಸ್ಥಿತರಿದ್ದರು.